This is the title of the web page
This is the title of the web page

Please assign a menu to the primary menu location under menu

State

ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ : ಕರ್ನಾಟಕ ರಾಜ್ಯದಲ್ಲಿ ಒಂದು ಪಯಣ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ


ಗದಗ ಅಗಸ್ಟ ೩೦:ರಾಜ್ಯ ಸರ್ಕಾರದ ಗ್ರಾಮೀಣಾಬಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದ ವತಿಯಿಂದ ಸೆಪ್ಟೆಂಬರ್ ೧ ಮತ್ತು ೨ ರಂದು ಗ್ರಾಮ ಸ್ವರಾಜ ಮತ್ತು ಪಂಚಾಯತ್ ರಾಜ್ : ಕರ್ನಾಟಕ ರಾಜ್ಯದಲ್ಲಿ ಒಂದು ಪಯಣ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ನಾಗಾವಿಯ ಕೆ.ಎಸ್.ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ಆವರಣದ ಕೌಶಲ್ಯ ವಿಕಾಸ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಚಾರ ಸಂಕಿರಣದ ಉದ್ಘಾಟನೆ ಕಾರ್ಯಕ್ರಮವು ಸೆಪ್ಟೆಂಬರ್ ೧ ರಂದು ಬೆಳಿಗ್ಗೆ ೧೦ ಗಂಟೆಗೆ ಜರುಗಲಿದ್ದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಘನ ಉಪಸ್ಥಿತಿಯಲ್ಲಿ ಜರುಗುವ ಕಾರ್ಯಕ್ರಮವನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ಸದಸ್ಯರುಗಳಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ರೋಣ ಶಾಸಕ ಜಿ.ಎಸ್.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ, ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ, ಕಳಸಾಪುರ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅನುಸೂಯಾ ಬೆಟಗೇರಿ, ಅಸುಂಡಿ ಗ್ರಾ.ಪಂ. ಅಧ್ಯಕ್ಷ ತಾಜುದ್ದೀನ ಓಲೇಕಾರ, ನಾಗಾವಿ ಗ್ರಾ.ಪಂ. ಅಧ್ಯಕ್ಷ ಕುಬೇರಪ್ಪ ರಾಠೋಡ ಆಗಮಿಸುವರು.
ಅತಿಥಿಗಳಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾ ಮಹಾದೇವನ್, ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರುಗಳು ಆಗಮಿಸಲಿದ್ದಾರೆ. ಕೆ.ಎಸ್.ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುಕಾಂತ ಎಸ್ ಚಟಪಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ವಿಶೇಷ ಆಹ್ವಾನಿತರಾಗಿ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶಿಖಾ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ಕೆ.ಎಸ್.ಆರ್.ಡಿ.ಪಿ.ಆರ್.ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರಶಾಂತಜೆ.ಸಿ, ಕರ್ನಾಟಕ ಪ್ರಾದೇಶಿಕ ಶಾಖೆ ಐ.ಐ.ಪಿ.ಎ.ಕಾರ್ಯದರ್ಶಿ ಪ್ರೊ.ಡಿ.ಜೀವನಕುಮಾರ್, ವಿಶ್ವವಿದ್ಯಾಲಯದ ಕೆ.ಎಸ್.ಆರ್.ಡಿ.ಪಿ.ಆರ್.ಕುಲಸಚಿವರಾದ ಪ್ರೊ.ಬಸವರಾಜ ಲಕ್ಕಣ್ಣವರ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಸಮಾರೋಪ ಸಮಾರಂಭ: ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ : ಕರ್ನಾಟಕ ರಾಜ್ಯದಲ್ಲಿ ಒಂದು ಪಯಣ ವಿಚಾರ ಸಂಕಿರಣದ ಸಮಾರೋಪ ಸಮಾರಂಭವು ಸೆಪ್ಟೆಂಬರ್ ೨ ರಂದು ಮಧ್ಯಾಹ್ನ ೩.೩೦ ಗಂಟೆಗೆ ಜರುಗಲಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಎಸ್.ಮೀನಾಕ್ಷಿ ಸುಂದರಂ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾ ಮಹಾದೇವನ್, ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಉಪಸ್ಥಿತರಿರುವರು. ಕೆ.ಎಸ್.ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಷ್ಣುಕಾಂತ ಎಸ್ ಚಟಪಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.


Leave a Reply