ಕೊಪ್ಪಳ: ಸತತ ಏಳನೇ ಬಾರಿಗೆ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಗುಜರಾತ್ ಫಲಿತಾಂಶ ಕರ್ನಾಟಕದಲ್ಲಿ ಮರುಕಳಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತು ಪ್ರಕಟಣೆ £Ãಡಿರುವ ಅವರು, ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಸತತ ೭ನೇ ಬಾರಿಗೆ ಗುಜರಾತ್‌ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಪ್ರಧಾ£ ನರೇಂದ್ರಮೋದಿ ಅವರ ಜನಪ್ರಿಯತೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಂಘಟನಾ ಚಾತುರ್ಯ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ತಂತ್ರಗಾರಿಕೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸರಳತೆ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಿದರು.
ವಿಶ್ವ ನಾಯಕ ನರೇಂದ್ರಮೋದಿ ಅವರ ಜನಪ್ರಿಯತೆಗೆ ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶವೇ ಸಾಕ್ಷಿ. ಸ್ವಚ್ಛ, ಪಾರದರ್ಶಕ ಹಾಗೂ ಸರ್ವರ ವಿಕಾಸವೇ ಪಕ್ಷದ ಗೆಲುವಿಗೆ ಕಾರಣವಾಗಿದೆ. ಒಂದು ರಾಜ್ಯದಲ್ಲಿ ಸತತವಾಗಿ ೭ನೇ ಬಾರಿ ಅಧಿಕಾರಕ್ಕೆ ಬರುವುದೆಂದರೆ ಸಾಮಾನ್ಯ ಮಾತಲ್ಲ. ಅಲ್ಲಿನ ಜನತೆ ಪಕ್ಷ ಮತ್ತು ನಾಯಕತ್ವದ ಮೇಲೆ ನಂಬಿಕೆ ಇಟ್ಟು ಹಿಂದಿನ ದಾಖಲೆಗಳನ್ನು ಮುರಿದು ಇಷ್ಟು ದೊಡ್ಡ ಮಟ್ಟದಲ್ಲಿ ಜನಾದೇಶ £Ãಡಿರುವುದು £ಜಕ್ಕೂ ಶ್ಲಾಘ£Ãಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಖಂಡಿತವಾಗಿ ಪರಿಣಾಮ ಬೀರಲಿದೆ. ಇಲ್ಲಿನ ಮತದಾರರು ಕೂಡ ಪ್ರಬುದ್ದರಾಗಿದ್ದು, ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಕೈ ಹಿಡಿಯಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿ ಹಿರಿಯ ನಾಯಕರ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ. ಕರ್ನಾಟಕದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು.
Gadi Kannadiga > State > ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ: ಸಿವಿಸಿ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023