ಗದಗ ಫೆಬ್ರುವರಿ ೧೩: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ ೨೦೨೨-೨೩ ನೇ ಸಾಲಿನಲ್ಲಿ ಗಿರಿಜನ ಉಪಯೋಜನೆಯಡಿ ಗುರು ಶಿಷ್ಯ ಪರಂಪರೆಯಲ್ಲಿ ಅಕಾಡೆಮಿ ವ್ಯಾಪ್ತಿಯೊಳಗೆ ಬರುವ ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ನೃತ್ಯ ( ಭರತನಾಟ್ಯ ಕಥಕ್, ಕೂಚಿಪುಡಿ) ಕಥಾ ಕೀರ್ತನ ಮತ್ತು ಗಮಕ ಕ್ಷೇತ್ರಗಳಲ್ಲಿ ಯುವ ಕಲಾವಿದರಲ್ಲಿ ಕಲಾನೈಪುಣ್ಯತೆಯನ್ನು ಹೆಚ್ಚಿಸುವ ಸಲುವಾಗಿ ಪ್ರತಿಷ್ಠಿತ ಸಂಸ್ಥೆಯ ಗುರುಗಳ ಮೂಲಕ ೫ ತಿಂಗಳ ಸಂಗೀತ ನೃತ್ಯ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುವುದು.
ತರಬೇತಿಯಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳು : ಅರ್ಹ ೧೬ ರಿಂದ ೩೦ ವರ್ಷದ ಒಳಗಿನವರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಗುರುಗಳ ಬಳಿ ಕನಿಷ್ಟ ೨ ವರ್ಷ ಅಭ್ಯಾಸ ಮಾಡಿರಬೇಕು. ಗುರುಗಳ ಪ್ರಮಾಣ ಪತ್ರ ಲಗತ್ತಿಸಬೇಕು.
ಪ್ರತಿಷ್ಠಿತ ಸಂಸ್ಥೆಗಳು ಅರ್ಜಿ ಸಲ್ಲಿಸಲು ಕನಿಷ್ಟ ೧೦ ವರ್ಷಗಳ ಸೇವೆ ಸಲ್ಲಿಸಿರಬೇಕು. ಸಂಸ್ಥೆ ನೊಂದಣಿ ಹಾಗೂ ನವೀಕರಣ ಪತ್ರ ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ರಿಜಿಸ್ಟ್ರಾರ್ , ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ ನೇ ಮಹಡಿ, ಬೆಂಗಳೂರು -೨ ಇಲ್ಲಿಗೆ ಫೆಬ್ರುವರಿ ೨೮ ರೊಳಗಾಗಿ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-೨ ದೂರವಾಣಿ ಸಂಖ್ಯೆ ೦೮೦-೨೨೨೧೫೦೭೨ ಸಂಪರ್ಕಿಸಬಹುದಾಗಿದೆ.
Gadi Kannadiga > State > ಗಿರಿಜನ ಉಪ ಯೋಜನೆಯಡಿ ಗುರು ಶಿಷ್ಯ ಪರಂಪರೆ ತರಬೇತಿ ಶಿಬಿರ