ನವದೆಹಲಿ: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಮೇಲೆ ಸುಪ್ರೀಂಕೋರ್ಟ್ನಲ್ಲಿ ವಿಭಿನ್ನ ತೀರ್ಪು ಪ್ರಕಟವಾಯಿತು.
ಓರ್ವ ನ್ಯಾಯಮೂರ್ತಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಇನ್ನೊರ್ವರು ಹೈಕೋರ್ಟ್ ಆದೇಶವನ್ನು ರದ್ದು ಮಾಡಿದರು.
ನ್ಯಾಯಪೀಠದ ಸದಸ್ಯ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಸಿದರೆ, ಮತ್ತೊರ್ವ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹಿಬಾಜ್ ಬ್ಯಾನ್ ಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದರು. ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.
ಸದ್ಯಕ್ಕೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶವಿಲ್ಲ. ಮುಂದಿನ ತೀರ್ಪು ಬರುವವರೆಗೂ ಹೈಕೋರ್ಟ್ ತೀರ್ಪನ್ನೇ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ.