This is the title of the web page
This is the title of the web page

Please assign a menu to the primary menu location under menu

Local News

ಜನರ‌ ಮನೆಬಾಗಿಲಿಗೆ ಸರಕಾರಿ ಸೇವೆ ಒದಗಿಸುವುದು “ಗ್ರಾಮ ಒನ್” ಉದ್ಧೇಶ: ಜಿಲ್ಲಾಧಿಕಾರಿ ಹಿರೇಮಠ


ಬೆಳಗಾವಿ: ಸಮೀಪದ ಸುಳಗಾ (ಉಚಗಾಂವ) ಗ್ರಾಮದಲ್ಲಿ ಆರಂಭಿಸಲಾಗಿರುವ “ಗ್ರಾಮ ಒನ್” ಕೇಂದ್ರಕ್ಕೆ ಭಾನುವಾರ(ಫೆ.6) ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕೇಂದ್ರದ ಕಾರ್ಯಚಟುವಟಿಕೆಗಳು ಮತ್ತು ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ವಿವಿಧ ಇಲಾಖೆಗಳ ಸರಕಾರಿ ಸೇವೆಗಳನ್ನು ಜನರ ಮನೆಬಾಗಿಲಿಗೆ‌ ಒದಗಿಸುವ ಮಹತ್ವಾಕಾಂಕ್ಷೆಯನ್ನು ಮುಖ್ಯಮಂತ್ರಿಗಳು ಹೊಂದಿದ್ದಾರೆ. ಆ ಹಿನ್ನೆಲೆಯಲ್ಲಿ ಗ್ರಾಮ ಒನ್ ಯೋಜನೆಯನ್ನು ಜಾರಿಗೆ ತರಲಾಗಿದೆ.

ಸರಕಾರದ ಮಾರ್ಗಸೂಚಿ ಪ್ರಕಾರ ‌ಪ್ರತಿಯೊಂದು ಸೇವೆಗೆ ನಿಗದಿತ ಶುಲ್ಕವನ್ನು ಮಾತ್ರ ಪಡೆಯಬೇಕು. ಕೇಂದ್ರದಲ್ಲಿ ಲಭ್ಯವಿರುವ ಸೇವೆಗಳ ಮಾಹಿತಿ ಫಲಕವನ್ನು ಅಳವಡಿಸಬೇಕು. ಕಂಪ್ಯೂಟರ್ ಹಾಗೂ ಅಂತರ್ಜಾಲ ಸಂಪರ್ಕ ಸೇರಿದಂತೆ ಸುಸಜ್ಜಿತ ಸೌಕರ್ಯಗಳನ್ನು ಹೊಂದಿರಬೇಕು ಎಂದು ಗ್ರಾಮ ಒನ್ ಕೇಂದ್ರದ ಆಪರೇಟರ್ ಗಳಿಗೆ ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.


Leave a Reply