This is the title of the web page
This is the title of the web page

Please assign a menu to the primary menu location under menu

State

ಐತಿಹಾಸಿಕ ಲಕ್ಕುಂಡಿ ಉತ್ಸವ ಸಾರ್ವಜನಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ


ಗದಗ ಫೆ.೧೦: ಐತಿಹಾಸಿಕ ಲಕ್ಕುಂಡಿ ಉತ್ಸವವು ಫೆಬ್ರವರಿ ೧೦ ರಿಂದ ೧೨ ವರೆಗೆ ಗದಗ ತಾಲ್ಲೂಕಿನ ಲಕ್ಕುಂಡಿಯಲ್ಲಿ ನಡೆಯಲಿದೆ. ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಸಾರಿಗೆ ಬಸ್‌ಗಳಿಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹಾಗೂ ಎಂ ಸಿ ಎ ನಿಗಮದ ಅಧ್ಯಕ್ಷ ಎಂ ಎಸ್ ಕರಿಗೌಡ್ರ ಅವರು ಗದಗ ಹೊಸ ಬಸ್ ನಿಲ್ದಾಣದಲ್ಲಿ ಶುಕ್ರವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಐತಿಹಾಸಿಕ ಲಕ್ಕುಂಡಿ ಉತ್ಸವಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸುವ ಎಲ್ಲ ಸಾರ್ವಜನಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ದೊರೆಯಬೇಕು. ಇತರ ಜಿಲ್ಲೆಗಳಿಂದ ಬರುವವರಿಗೆ ಸುಗಮ ಸಾರಿಗೆ ಸಂಚಾರ ತಲುಪಬೇಕು ಎಂದು ಹೇಳಿದರು.ಒಟ್ಟು ೧೦ ಬಸ್‌ಗಳನ್ನು ಉಚಿತವಾಗಿ ಸಾರ್ವಜನಿಕರಿಗೆ ಸಂಚರಿಸಲು ಸೌಲಭ್ಯ ಒದಗಿಸಿದೆ. ಗದಗಿನ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಬಸ್ ನಿಲ್ದಾಣದಿಂದ ನಿರಂತರವಾಗಿ ಬಸ್‌ಗಳು ಸಂಚರಿಸಲಿವೆ. ಸಾರ್ವಜನಿಕರು ಬಸ್‌ಗಳ ಉಚಿತ ಸೇವೆ ಪ್ರಯೋಜನ ಪಡೆಯಬೇಕು ಎಂದರು.
ಉದ್ಘಾಟನೆ ನಂತರ ಅದೇ ಬಸ್‌ನಲ್ಲಿ ಲಕ್ಕುಂಡಿಯವರೆಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲ ಜನಪ್ರತಿನಿಧಿಗಳು , ಅಧಿಕಾರಿಗಳು ಸಂಚರಿಸುವ ಮೂಲಕ ಮಾದರಿಯಾದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ., ಉಪವಿಭಾಗಾಧಿಕಾರಿ ಅನ್ನಪೂರ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಡಿಯುಡಿಸಿ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳೆ, ಪ್ರದೀಪ ನವಲಗುಂದ ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಶೀನಯ್ಯ ಹಾಗೂ ಸಿಬ್ಬಂದಿಗಳು ಹಾಜರಿದ್ದರು.


Gadi Kannadiga

Leave a Reply