ಗದಗ ಎಪ್ರಿಲ್ ೨೯: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಮೇ ೧೦ ರಂದು ನಡೆಯಲಿದ್ದು,ಅಂದು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾರ್ಮಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಕಾರ್ಮಿಕ ಇಲಾಖೆ ಸೂಚಿಸಿದೆ. ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೧೯೫೧ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ ೧೩೫(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ ೧೯೬೩ ಕಲಂ ೩(ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಣೆ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕಿದೆ. ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮತದಾನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು. ತಪ್ಪಿದ್ದಲ್ಲಿ ಸಂಬಂದಪಟ್ಟ ಸಂಸ್ಥೆ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಆರ್.ಜಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಮತದಾನದ ದಿನದಂದು ವೇತನ ಸಹಿತ ರಜೆ
ಮತದಾನದ ದಿನದಂದು ವೇತನ ಸಹಿತ ರಜೆ
Suresh29/04/2023
posted on
More important news
ಬೀಟ್ ಮೀಟಿಂಗ್
29/05/2023
ಸಚಿವ ಎಚ್.ಕೆ.ಪಾಟೀಲ ಅವರ ಜಿಲ್ಲಾ ಪ್ರವಾಸ
29/05/2023
ಶ್ರೀ ಯಾಜ್ಞವಲ್ಕö್ಯ ಗುರುಗಳ ಜಯಂತಿ
29/05/2023
ಅಧಿಕಾರ ಸ್ವೀಕಾರ
29/05/2023