This is the title of the web page
This is the title of the web page

Please assign a menu to the primary menu location under menu

State

ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ


ಕೊಪ್ಪಳ ಆಗಸ್ಟ್ ೩೧ : ತೋಟಗಾರಿಕೆ ಇಲಾಖೆಯಿಂದ ೨೦೨೩-೨೪ ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಳಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, (ಗೇರು, ಪೇರಲ, ಮಾವು, ಬಾಳೆ, ದಾಳಿಂಬೆ, ಪಪ್ಪಾಯ, ಇತರೆ) ರೋಗ ಮತ್ತು ಕೀಟ ನಿಯಂತ್ರಣ, ನೀರು ಸಂಗ್ರಹಣಾ ಘಟಕ, ಕೊಯ್ಲೋತ್ತರ ನಿರ್ವಹಣೆ ಘಟಕಗಳಿಗೆ, ಸಂರಕ್ಷಿತ ಬೇಸಾಯ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಯಾಂತ್ರೀಕರಣ ಹಾಗೂ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಬಯಸುವವರು ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ, ಕಾರ್ಯಕ್ರಮದಡಿ ಸೋಲಾರ್ ಪಂಪ್‌ಸೆಟ್ ಹಾಗೂ ವಿವಿಧ ಯಂತ್ರೋಪಕರಣಗಳನ್ನು ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ. ೪೦ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ, ಅತಿ ಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ. ೫೦ ರಂತೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದ್ದು. ೩ ಎಚ್.ಪಿ ಸೋಲಾರ್ ಪಂಪ್‌ಸೆಟ್‌ಗಳಿಗೆ ೧ ಲಕ್ಷ ರೂ. ಹಾಗೂ ೫ ಎಚ್.ಪಿ. ಹೆಚ್ಚಿನ ಸಾಮಾರ್ಥ್ಯದ ಸೋಲಾರ್ ಪಂಪ್‌ಸೆಟ್‌ಗಳಿಗೆ ೧.೫೦ ಲಕ್ಷ ರೂ. ಗಳಿಗೆ ಸಹಾಯಧನ ನೀಡಲಾಗುತ್ತಿದೆ.
ಕೇಂದ್ರೀಯ ವಲಯ, ರಾಜ್ಯವಲಯ ಮತ್ತು ಜಿಲ್ಲಾ ವಲಯ ಯೋಜನೆಗಳ ಸಹಾಯಧನ ಪಡೆಯಲು ಆಸಕ್ತ ರೈತರು ಸೆಪ್ಟೆಂಬರ್ ೨೦ರೊಳಗಾಗಿ ಅರ್ಜಿ ಸಮೇತ ಅಗತ್ಯವಾದ ದಾಖಲಾತಿಗಳನ್ನು ಸಂಬಂಧಪಟ್ಟ ಆಯಾ ತಾಲೂಕಾ ತೋಟಗಾರಿಕಾ ಕಚೇರಿಯಲ್ಲಿ ಸಲ್ಲಿಸಬೇಕು. ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಟತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply