This is the title of the web page
This is the title of the web page

Please assign a menu to the primary menu location under menu

Local News

ಬಿಜೆಪಿಗೆ ಬಿಸಿ ಮುಟ್ಟಿಸಲು ಮುಂದಾದ ಕೈಪಡೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ


ಬೆಳಗಾವಿ:  ಗುತ್ತಿಗೆದಾರ ಆತ್ಮಹತ್ಯೆಗೆ ಕಾರಣವಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಬಿಜೆಪಿ  ಸಭೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ಹೊಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಯ ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಸಭೆಯೊಳಗೆ ನುಗ್ಗಲು ಯತ್ನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಅವರು ಆತ್ಮಹತ್ಯೆ ಮಾಡಿಕೊಳ್ಳಲು 40% ಕಮಿಷನ್ ಕೇಳಿರುವುದೇ ಕಾರಣ. ನನ್ನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಡೆತ್ ನೋಟ್ ನಲ್ಲಿ ಉಲ್ಲಿಖಿಸಿದ್ದಾರೆ. ಕೂಡಲೇ ಸಚಿವ ಈಶ್ವರಪ್ಪನವರ ರಾಜೀನಾಮೆ ಪಡೆದು ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು. ಬಿಜೆಪಿಯ ಹಾಗೆ ರಾಜಕಾರಣ ಯಾರಿಗೂ ಮಾಡಲು ಬರುವುದಿಲ್ಲ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಗುತ್ತಿಗೆದಾರರು  40% ಕಮಿಷನ್ ಕೇಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಗೆ ಪತ್ರ ಬರೆದಿದ್ದರು. ಮಾಧ್ಯಮ ಮಿತ್ರರಿಗೆ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದು ಸಚಿವ ಈಶ್ವರಪ್ಪನವರ ಮೇಲೆ ಗಂಭೀರ ಆರೋಪವಾಗಿದೆ. ಅವರನ್ನು ಕೂಡಲೇ ಬಂಧನ ಮಾಡಿ ತನಿಖೆ ಮಾಡಬೇಕು. ಸಂತೋಷ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಒತ್ತಾಯಿಸಿದರು.

ಬೆಳಗಾವಿ ಕಾಂಗ್ರೆಸ್ ಅಧಕ್ಷ ವಿನಯ ನಾವಲಗಟ್ಟಿ,  ನಗರ ಘಟಕದ ಅಧ್ಯಕ್ಷ ರಾಜು ಸೇಠ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.


Gadi Kannadiga

Leave a Reply