This is the title of the web page
This is the title of the web page

Please assign a menu to the primary menu location under menu

Local News

ಹುಕ್ಕೇರಿ ತಾಲೂಕಾ ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನ


ಬೆಳಗಾವಿ:- ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆಯ, ಹುಕ್ಕೇರಿ ತಾಲೂಕಾ ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನ ರವಿವಾರ ದಿ:೨೨/೦೧/೨೦೨೩ ರಂದು, ಮಧುಬನ ಕಲ್ಯಾಣಮಂಟಪ ಹೆಬ್ಬಾಳ ಗ್ರಾಮದಲ್ಲಿ ಜರುಗಲಿದೆ. ಮುಂಜಾನೆ:೮:೦೦ ಘಂಟೆಗೆ, ಹೆಬ್ಬಾಳ ಗ್ರಾಮದ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷರು ಶ್ರೀ ಬಾಳಪ್ಪಾ ವಿಠ್ಠಲ ಕಬ್ಬೂರಿ ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸುವರು. ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀ. ಮೆಟಗುಡ್ಡ ಅವರು ಪರಿಷತ್ತಿನ ಧ್ವಜಾರೋಹಣವನ್ನು ನೆರವೇರಿಸುವರು. ಕ.ಸಾ.ಪ.ಹುಕ್ಕೇರಿ ತಾಲೂಕಾ ಅಧ್ಯಕ್ಷರು ಶ್ರೀ ಪ್ರಕಾಶ ಅವಲಕ್ಕಿ ಅವರು ನಾಡ ಧ್ವಜಾರೋಹಣವನ್ನು ನೆರವೇರಿಸುವರು. ನಿಡಸೋಸಿ ಸಿದ್ಧಸಂಸ್ಥಾನಮಠ ಶ್ರೀ.ಮ.ನಿ.ಪ್ರ.ಜಗದ್ಗುರು ಶ್ರೀ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಶ್ರೀ.ಷ.ಬ್ರ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ.ಮ.ನಿ.ಪ್ರ. ಶ್ರೀ ರಾಚೋಟಿ ಮಹಾಸ್ವಾಮಿಗಳು, ಶ್ರೀ.ಮ.ನಿ.ಪ್ರ. ಶ್ರೀ ಗುರುಸಿದ್ಧ ಮಹಾಸ್ವಾಮಿಗಳು, ಪ.ಪೂ.ಶ್ರೀ ಆನಂದ ಮಹಾರಾಜರು ಸಮ್ಮೇಳನವು ಇವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ. ಯಮಕನಮರಡಿ ಮಾನ್ಯ ಶಾಸಕರು ಶ್ರೀ.ಸತೀಶ ಜಾರಕಿಹೊಳಿ ಅವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಶ್ರೀ.ಮಹಾವೀರ ರಾಯಪ್ಪ ಬಾಳಿಕಾಯಿ ಅವರು ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀ. ಮೆಟಗುಡ್ಡ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕ.ಸಾ.ಪ.ಹುಕ್ಕೇರಿ ತಾಲೂಕಾ ಅಧ್ಯಕ್ಷರು ಶ್ರೀ ಪ್ರಕಾಶ ಅವಲಕ್ಕಿ ಆಶಯ ನುಡಿಗಳನ್ನಾಡಲಿದ್ದಾರೆ.
ಮಾಜಿ ಉಪಸಭಾಪತಿಗಳು ಶ್ರೀ ಸಚ್ಚಿದಾನಂದ ಖೋತ, ಮಾಜಿ ಸಚಿವರು ಶ್ರೀ ಶಶಿಕಾಂತ ನಾಯಿಕ ಮುಖ್ಯ ಅತಿಥಿಗಳಾಗಿ ಆಗಮಿಸಿಲಿದ್ದಾರೆ. ಡಾ.ವಿದ್ಯಾರಣ್ಯ ಹಿರೇಮಠ, ಶ್ರೀ ಭರಮಗೌಡ ಪಾಟೀಲ, ಕುಶಾಲ ಖೋತ ಅವರು ಅತಿಥಿಗಳಾಗಿ ಆಗಮಿಸಿಲಿದ್ದಾರೆ.
ಕ.ಸಾ.ಪ.ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಾ ಅಧ್ಯಕ್ಷರುಗಳು, ಸಾಹಿತಿಗಳು, ಕಲಾವಿದರು, ಬೆಳಗಾವಿ ಜಿಲ್ಲಾ ಕ.ಸಾ.ಪ. ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು, ಕ.ಸಾ.ಪ. ಸರ್ವ ಸದಸ್ಯರು ಮತ್ತು ಕನ್ನಡಪರ ಸಂಘಟನೆಗಳು, ಸಮಸ್ತ ಕನ್ನಡ ಮನಸ್ಸುಗಳು ಎಲ್ಲರೂ ಈ ಕಾರ್ಯಕ್ರಮಕ್ಕೆ ಆಗಮಿಸಿ ಶೋಭೆತರಬೇಕೆಂದು, ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀ ಮೆಟಗುಡ್ಡ ಅವರು ಹಾಗೂ ಕ.ಸಾ.ಪ. ಹುಕ್ಕೇರಿ ತಾಲೂಕಾ ಅಧ್ಯಕ್ಷರು ಶ್ರೀ ಪ್ರಕಾಶ ಅವಲಕ್ಕಿ ಅವರು ವಿನಂತಿಸಿಕೊಂಡಿದ್ದಾರೆ.


Gadi Kannadiga

Leave a Reply