ಗದಗ ಡಿಸೆಂಬರ್ ೯: ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇವರ ಸಂಯುಕ್ತಾಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ ೧೦ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರಾದ ಕೆ. ಗುರುಪ್ರಸಾದ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜು, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ. ಪಲ್ಲೇದ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ. ಮೌಲ್ವಿ ಆಗಮಿಸುವರು.
Gadi Kannadiga > State > ಮಾನವ ಹಕ್ಕುಗಳ ದಿನಾಚರಣೆ