This is the title of the web page
This is the title of the web page

Please assign a menu to the primary menu location under menu

Local News

ಮೂರು ವರ್ಷದ ಸೇವೆ ನನಗೆ ತೃಪ್ತಿ ತಂದಿದೆ: ಲಕ್ಷ್ಮಣ ನಿಂಬರಗಿ


ಬೆಳಗಾವಿ:ಬೆಳಗಾವಿ ಜಿಲ್ಲೆಯಲ್ಲಿನ ಮೂರು ವರ್ಷಗಳ ಸೇವೆ ನನಗೆ ತೃಪ್ತಿ ತಂದಿದೆ ಎಂದು ಬೆಳಗಾವಿ ಜಿಲ್ಲೆಯ ನಿರ್ಗಮಿತ ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿದರು.

ಬೆಳಗಾವಿ ನೂತನ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದ ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಪೋಲಿಸ್ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಗಳಿಗೆ ಪ್ರಯತ್ನಿಸಿದ್ದೇನೆ ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಜಿಲ್ಲೆಯ ಜನತೆಗೆ ಧನ್ಯವಾದಗಳನ್ನು ತಿಳಿಸಿದರು.

ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಡಾ. ಸಂಜೀವ್ ಪಾಟೀಲ ಈಗ ನೂತನವಾಗಿ ಬೆಳಗಾವಿ ಜಿಲ್ಲೆಯ ಎಸ್ ಪಿ ಆಗಿ ಅಧಿಕಾರ ಸ್ವೀಕಾರ ಮಾಡಿದರು.

ಇವರ ಸ್ಥಾನಕ್ಕೆ ಮಂಗಳವಾರ ಬೆಂಗಳೂರು ಡಿಸಿಪಿ ಆಗಿ ಲಕ್ಷ್ಮಣ ನಿಂಬರಗಿ ಅಧಿಕಾರ ಸ್ವೀಕರಿಸಲಿದ್ದಾರೆ.  ಎರಡು ದಿನಗಳ ಹಿಂದೆ ಡಾ.ಸಂಜೀವ್ ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ನಿರ್ಗಮಿತ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ನೂತನ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು.


Gadi Kannadiga

Leave a Reply