This is the title of the web page
This is the title of the web page

Please assign a menu to the primary menu location under menu

State

ಸರಕಾರಿ ಅಧಿಕಾರಿ ಸಿಬ್ಬಂದಿಗಳು ತಪ್ಪಿತಸ್ಥರಾಗಿದ್ದರೆ ಶಿಕ್ಷೆಗೆ ಗುರಿಪಡಿಸಲಾಗುವದು :ಪಾಟೀಲ


ಗದಗ ಜು.೭: ಜನಸೇವಕರಾದ ಸರಕಾರಿ ಅಧಿಕಾರಿ ಸಿಬ್ಬಂದಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕ್ಷಮತೆಯಿಂದ ಹಾಗೂ ಅವಿರತವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿರು. ಅಧಿಕಾರಿ ಸಿಬ್ಬಂದಿಗಳು ತಮ್ಮ ಕಾರ್ಯವನ್ನು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುಬೇಕು. ಯಾವುದೇ ಅಧಿಕಾರಿ ಸಿಬ್ಬಂದಿಗಳ ಮೇಲೆ ಗುರುತರ ಆರೋಪ ಕೇಳಿ ಬಂದಲ್ಲಿ ಅಂತಹವರ ವಿರುದ್ಧ ಮೊಕದ್ದಮೆ ಹೂಡಿ ತಪ್ಪಿತಸ್ಥರಾಗಿದ್ದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವದು ಎಂದು ತಿಳಿಸಿದರು.
ಜಿಲ್ಲೆಯ ಕಂದಾಯ, ಜಿಲ್ಲಾ ಪಂಚಾಯತ, ಸ್ಥಳೀಯ ಸಂಸ್ಥೆಗಳು, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕುರಿತು ದೂರುಗಳು ಬಂದಿದ್ದು ಈ ಕುರಿತು ನಮ್ಮ ಅಧಿಕಾರಿಗಳು ಪರಿಶೀಲನೆ ಮಾಡಿದ್ದು ಈ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ದೂರುಗಳಿಗೆ ಸಂಬಂದಿಸಿದಂತೆ ಮೊಕದ್ದಮೆ ಹೂಡಿ ಅವುಗಳ ಕುರಿತು ಮೇಲ್ವಿಚಾರಣೆ ಮಾಡಿ ತಪಿತಸ್ಥರು ಯಾರೆಂದು ಕಂಡು ಹಿಡಿಯಲಾಗುವದು. ಆಸ್ಪತ್ರೆಗಳಲ್ಲಿ ವೈದ್ಯರುಗಳು ಗೈರು ಹಾಜರಾಗುವುದು, ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದೆ ಇರುವದು ಹಾಗೂ ಪ್ರಾಂಗಣವನ್ನು ಸ್ವಚ್ಛವಾಗಿಡದ ಕುರಿತು ಹಲವಾರು ವಿಷಯಗಳು ಗಮನಕ್ಕೆ ಬಂದಿದ್ದು ಇವುಗಳ ಕುರಿತು ಪರಮಾರ್ಶಿಸಲಾಗುವದು. ಜನ ಸೇವಕರು ತಮ್ಮ ಕಾರ್ಯಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಹೇಗೆ ಸಾಧ್ಯವಾಗುತ್ತದೆ ಎಂಬುದನ್ನು ಸಭೆಯಲ್ಲಿ ಚರ್ಚಿಸಲಾಗಿರುತ್ತದೆ.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಒಟ್ಟು ೨೮ ದೂರುಗಳು ದಾಖಲಾಗಿವೆ. ಈ ದೂರುಗಳಿಗೆ ಸಂಬಂಧಿಸಿದಂತೆ ಈಗಾಗಲೇ ನೋಟಿಸಗಳನ್ನು ಜಾರಿ ಮಾಡಿ ಮಾಹಿತಿ ಕ್ರೋಡಿಕರಿಸಿ ತನಿಖೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಹಲವಾರು ಸಮಸ್ಯಗಳಿದ್ದು ಆ ಸಮಸ್ಯೆಗಳನ್ನು ಯಾವ ರೀತಿ ಪರಿಹರಿಸಬೇಕು. ಒಂದು ವೇಳೆ ಸಮಸ್ಯೆಗಳನ್ನು ಪರಿಹರಿಸದಿದ್ದಲ್ಲಿ ಯಾವ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಸೂಚನೆ ಅಧಿಕಾರಿಗಳಿಗೆ ನೀಡುವ ಉದ್ದೇಶದೊಂದಿಗೆ ಜಿಲ್ಲೆಗೆ ಭೇಟಿ ನೀಡಲಾಗಿರುತ್ತದೆ. ಈ ಭೇಟಿ ಕೇವಲ ದೂರುಗಳನ್ನು ದಾಖಲಿಸಿಕೊಂಡು ತಪ್ಪಿತಸ್ಥರಿಗೆ ಶಿಕ್ಷೆಗೆ ಗುರುಪಡಿಸುವದರ ಜೊತೆಗೆ ಇಂತಹ ತಪ್ಪುಗಳ ಮರುಕಳಿಸಿದರಲಿ ಎಂಬ ಉದ್ದೇಶದೊಂದಿಗೆ ಜಿಲ್ಲೆಗೆ ಭೇಟಿ ನೀಡಿ ಸಭೆ ಜರುಗಿಸಲಾಗಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ.ಬಿ, ಜಿಲ್ಲಾ ಪೊಲೀಸ್ ಅಧೀಕ್ಷಕರ ಬಿ.ಎಸ್.ನೇಮಗೌಡ, ಲೊಕಾಯಕ್ತ ಅಧೀಕ್ಷ ಸತೀಶ.ಎಸ್.ಚಿಟಗುಬ್ಬಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗುರುಪ್ರಸಾದ.ಕೆ, ಲೋಕಾಯುಕ್ತ ಡಿ.ವೈ.ಎಸ್.ಪಿ, ಶಂಕರ ರಾಗಿ ಉಪಸ್ಥಿತರಿದ್ದರು.


Leave a Reply