ಬೆಳಗಾವಿ: ಬೆಳಗಾವಿಯಲ್ಲಿ ಈಗ ಮತ್ತೆ ಕಿಡಿಗೇಡಿಗಳು ಶಾಂತಿ ಕದಡುವ ಕೆಲಸ ಮಾಡಿದ್ದು, ಕನ್ನಡ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.
ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದ ರಸ್ತೆ ಮಾರ್ಗದಲ್ಲಿ ಇರುವ ರಸ್ತೆಸಂಚಾರ ಜಾಗೃತಿ ಮೂಡಿಸುವ ಫಲಕಕ್ಕೆ ಕಿಡಿಗೇಡಿಗಳು ಕಪ್ಪುಮಸಿ ಬರೆದಿದ್ದಾರೆ.ಲೋಕೋಪಯೋಗಿ ಇಲಾಖೆ ಅಳವಡಿಸಿದ್ದ ಈ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿಯುವ ಮೂಲಕ ಬೆಳಗಾವಿಯಲ್ಲಿ ಮತ್ತೆ ಅಶಾಂತಿಗೆ ಕಾರಣರಾಗಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನ ವೇಳೆ ಬೆಳಗಾವಿಯಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಲಾಗಿತ್ತು. ಆಗ ಇಡೀ ಕರ್ನಾಟಕದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.