This is the title of the web page
This is the title of the web page

Please assign a menu to the primary menu location under menu

State

ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನದ ಪೂರ್ವಭಾವಿ ಸಭೆಯಲ್ಲಿ ಅಬ್ದುಲ್ ಅಜೀಮ್ ಸಲಹೆ ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಡಿ


ಕೊಪ್ಪಳ ಫೆಬ್ರವರಿ ೦೯ : ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದಡಿ ಅರ್ಹ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಸೂಕ್ತ ಸೌಲಭ್ಯ ಒದಗಿsಸಲು ಕ್ರಮವಹಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಫೆಬ್ರವರಿ ೦೮ ರಂದು ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ಸಮುದಾಯದವರನ್ನು ಮುಖ್ಯವಾಹಿನಿಗೆ ತರಲು ರೂಪಿಸಿರುವ ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದು ಅತ್ಯವಶ್ಯಕವಾಗಿದೆ. ಈ ಯೋಜನೆಯ ಅನುಷ್ಠಾನ ವಿಧಗಳು ಮತ್ತು ಕಾರ್ಯಕ್ರಮಕ್ಕೆ ಪೂರಕವಾಗಿರುವ ಯೋಜನೆಗಳನ್ನು ಪಟ್ಟಿ ಮಾಡಿ ಆಯಾ ಇಲಾಖೆಗಳಿಗೆ ನಿರ್ದಿಷ್ಟ ಜವಾಬ್ದಾರಿ ಹಂಚಿಕೆ ಮಾಡಬೇಕು ಎಂದು ಸಲಹೆ ಮಾಡಿದರು.
ಈ ಕಾರ್ಯಕ್ರಮದಡಿ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೆöÊಸ್ತ್, ಜೈನ, ಪಾರ್ಸಿ, ಬೌದ್ಧ ಹಾಗೂ ಇನ್ನೀತರ ಸಮುದಾಯಗಳ ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯವಾಗಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ನಿವೇಶನ, ಮನೆಗಳ ಹಂಚಿಕೆ, ಸ್ವಯಂ ಉದ್ಯೋಗ ಯೋಜನೆ, ನರೇಗಾ, ಎನ್‌ಆರ್‌ಎಲ್‌ಎಂ ಮುಂತಾದ ಯೋಜನೆಗಳಿಗೆ ಮತ್ತು ಕೈಗಾರಿಕಾ ಪ್ರದೇಶಗಳಲ್ಲಿನ ನಿವೇಶನ ಹಂಚಿಕೆಯಲ್ಲೂ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳಿಗೆ ಆದ್ಯತೆ ನೀಡಬೇಕು. ಆರೋಗ್ಯ ಇಲಾಖೆಯ ಆಯ್ದ ಕಾರ್ಯಕ್ರಮಗಳಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಬೇಕು ಎಂದು ತಿಳಿಸಿದರು.
ಅಲ್ಪಸಂಖ್ಯಾತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಚರ್ಚೆಯಾದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಒಂದು ಕಾರ್ಯಾಗಾರವನ್ನು ಹಮ್ಮಿಕೊಂಡು ಜಿಲ್ಲೆಯ ಎಲ್ಲಾ ಭಾಗದ ಅಲ್ಪಸಂಖ್ಯಾತ ಸಮುದಾಯದವರನ್ನು ಕಾರ್ಯಾಗಾರಕ್ಕೆ ಆಹ್ವಾನಿಸಿ ಅಲ್ಪಸಂಖ್ಯಾತರ ನಾನಾ ಯೋಜನೆಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಕಾರ್ಯಾಗಾರ ಏರ್ಪಡಿಸಲು ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಕಾಪಾಡುವ ಕುರಿತಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಹ ಅಧ್ಯಕ್ಷರ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ನಿಸಾರ ಅಹ್ಮೆದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಘುನಾಥ, ವಿಶೇಷ ಅಧಿಕಾರಿಗಳಾದ ಅಂಜುಮ್ ಅಹ್ಮೆದ್, ಉಪವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಸಮೀರ್ ಮುಲ್ಲಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯ ರಾಣಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ ಸೇರಿದಂತೆ ಕೆ.ಎಂ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ವಕ್ಫ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Gadi Kannadiga

Leave a Reply