ಕೊಪ್ಪಳ ಮೇ 06:- ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮೇ 06ರಂದು ಮತ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು, ಮೈಕ್ರೋ-ವೀಕ್ಷಕರು, ಹೆಚ್ಚುವರಿ ಎಣಿಕೆ ಸಿಬ್ಬಂದಿಗೆ ಮತ ಎಣಿಕೆ ತರಬೇತಿ ಕಾರ್ಯಗಾರ ನಡೆಯಿತು.
ಕಾರ್ಯಗಾರವನ್ನುದ್ದೇಶಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮಾತನಾಡಿ, ವಿಧಾನಸಭಾ ಚುನಾವಣೆ ನಿಮಿತ್ತ ಮೇ 13ರಂದು ನಡೆಯಲಿರುವ ಮತ ಎಣಿಕೆಯು ನಗರದ ಶ್ರೀ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಚುನಾವಣೆಯ ಪ್ರಕ್ರಿಯೆಯಲ್ಲಿ ಮತಗಳ ಎಣಿಕೆಯು ಒಂದು ಅತೀ ಮಹತ್ವದ ಹಂತವಾಗಿದ್ದು, ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು, ಮೈಕ್ರೋ-ವೀಕ್ಷಕರು, ಹೆಚ್ಚುವರಿ ಎಣಿಕೆ ಸಿಬ್ಬಂದಿಯು ಮತ ಎಣಿಕೆ ಕೋಣೆಯಲ್ಲಿ ಶಿಸ್ತು ಪಾಲನೆ ಮತ್ತು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಮತ ಎಣಿಕೆ ಸಿಬ್ಬಂದಿಯು ಮುಕ್ತವಾಗಿ ಮತ್ತು ನ್ಯಾಯಸಮ್ಮತವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಮತ ಎಣಿಕೆ ನಡೆಯುವುದರಿಂದ ಎಲ್ಲಾ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಬೇಕು. ಅಂಚೆ ಮತದಾನದ ಮತ ಎಣಿಕೆಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು ಅದರ ಎಣಿಕೆಗಾಗಿ ಗಜೆಟೆಡ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಯಾವುದೇ ರೀತಿಯ ಅವಸರ ಮಾಡದೇ ಸರಿಯಾಗಿ ಮತ ಎಣಿಕೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಪ್ರತಿ ಸುತ್ತಿನ ಮತ ಎಣಿಕೆ ನಂತರ ಚುನಾವಣಾಧಿಕಾರಿಗಳಿಗೆ ವಿಳಂಬ ಮಾಡದೇ ವರದಿ ಸಲ್ಲಿಸುವುದು ಕಡ್ಡಾಯ ಎಂದು ತಿಳಿಸಿದರು.
ಮತ ಎಣಿಕೆ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರವಾರು 2 ಕೊಠಡಿಗಳ ವ್ಯವಸ್ಥೆ ಮಾಡಲಾಗಿದ್ದು, ಒಂದರಲ್ಲಿ ಅಂಚೆ ಎಣಿಕೆ ಮತ್ತೊಂದರಲ್ಲಿ ವಿದ್ಯುನ್ಮಾನ ಮತ ಮತಯಂತ್ರಗಳಲ್ಲಿನ ಮತ ಎಣಿಕೆ ಕಾರ್ಯ ಕೈಗೊಳ್ಳಲಾಗುವುದು. ಎಣಿಕೆ ಕಾರ್ಯಕ್ಕಾಗಿ ಪೀಠೋಪಕರಣಗಳು, ಭದ್ರತಾ ವ್ಯವಸ್ಥೆಯನ್ನು ಹಾಗೂ ಇತರೆ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಏಜೆಂಟರಗಳು ಬ್ಯಾಡ್ಜ್ ಧರಿಸುವುದು ಕಡ್ಡಾಯ. ಬ್ಯಾಡ್ಜ್ ಇಲ್ಲದ ಏಜೆಂಟರರಿಗೆ ಎಣಿಕೆ ಕೇಂದ್ರಕ್ಕೆ ಪ್ರವೇಶವಿರುವುದಿಲ್ಲ. ಶಿಸ್ತು, ಸುವ್ಯವಸ್ಥೆ ಮತ್ತು ಶಾಂತತೆ ಕಾಪಡಬೇಕು. ಮೊಬೈಲ್ ಪೋನ್ ಎಣಿಕೆ ಕೇಂದ್ರದೊಳಗೆ ಪ್ರವೇಶವಿಲ್ಲ. ಟೇಬಲಿನಿಂದ ಟೇಬಲಿಗೆ ಹಾಗೂ ಹಾಲ್‌ನಿಂದ ಹಾಲ್‌ಗೆ ಚಲವಲನ ನಿರ್ಬಂಧಿಸಿದೆ. ವಿದ್ಯುನ್ಮಾನ ಮತಯಂತ್ರಗಳನ್ನು ಮುಟ್ಟವಂತಿಲ್ಲ. ಚುನಾವಣಾಧಿಕಾರಿಗಳ ನಿರ್ದೆಶನಗಳನ್ನು ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಈ ಎಲ್ಲಾ ಅಂಶಗಳನ್ನು ಏಜೆಂಟರಗಳಿಗೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿಗಳು, ಆಯಾ ಕ್ಷೇತ್ರಗಳ ಚುಣಾವಣಾಧಿಕಾರಿಗಳಿಗೆ ತಿಳಿಸಿದರು.
ಮತ ಏಣಿಕೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಚುನಾವಣೆ ವೀಕ್ಷಕರು, ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾ ಮೇಲ್ವಿಚಾರಕರು, ಏಣಿಕೆ ಮೇಲ್ವಿಚಾರಕರು ಮತ್ತು ಏಣಿಕೆ ಸಹಾಯಕರು, ಉಮೇದುವಾರರು ಅಥವಾ ಏಜೆಂಟರು, ಇತರ ಸಹಾಯಕ ಸಿಬ್ಬಂದಿ ಹಾಗೂ ಚುನಾವಣಾ ಆಯೋಗದಿಂದ ಅನುಮತಿ ಪಡೆದ ಇತರ ವ್ಯಕ್ತಿಗಳನ್ನು ಹೊರತುಪಡಿಸಿ ಇನ್ನುಳಿದವರಿಗೆ ಪ್ರವೇಶವಿಲ್ಲ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ಮತ ಎಣಿಕೆ ಸಿಬ್ಬಂದಿಯು ಚುನಾವಣಾ ಆಯೋಗವು ಸೂಚಿಸಿರುವಂತೆ ಎಲ್ಲಾ ಅಂಶಗಳನ್ನು ಸಮಗ್ರವಾಗಿ ಗಮನಿಸಿ ಮತ ಎಣಿಕೆ ಕಾರ್ಯವನ್ನು ನೆರವೇರಿಸಬೇಕು. ಮತ ಎಣಿಕೆ ಸಂದರ್ಭದಲ್ಲಿ ಗೊಂದಲಗಳು ಎದುರಾದರೆ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಸೂಚನೆಯಂತೆ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ತರಬೇತಿ ಕೇಂದ್ರ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು ಮತ ಎಣಿಕೆಯ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನೀಡಿದರು.
ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವಿದ್ಯಾಧರ ಅವರು ಅಂಚೆ ಮತ ಎಣಿಕೆ ಕುರಿತು ತರಬೇತಿ ನೀಡಿದರು.
ತರಬೇತಿಯಲ್ಲಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ನಿಯೋಜನೆಗೊಂಡ ಮತ ಎಣಿಕೆ ಸಿಬ್ಬಂದಿ ಭಾಗವಹಿಸಿದ್ದರು.
Gadi Kannadiga > State > ಮತ ಎಣಿಕೆ ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಎಂ.ಸುಂದರೇಶ ಬಾಬು ಸೂಚನೆ- ಶಿಸ್ತು,ಜಾಗೃತೆಯಿಂದ ಮತ ಎಣಿಕೆ ಕಾರ್ಯ ನಿರ್ವಹಿಸಿ
ಮತ ಎಣಿಕೆ ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಎಂ.ಸುಂದರೇಶ ಬಾಬು ಸೂಚನೆ- ಶಿಸ್ತು,ಜಾಗೃತೆಯಿಂದ ಮತ ಎಣಿಕೆ ಕಾರ್ಯ ನಿರ್ವಹಿಸಿ
sharanappa06/05/2023
posted on

More important news
ಯಮನಪ್ಪ ಧರನಾಯಕ್ ನಿಧನ
02/06/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಂಗಳೂರು: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
31/05/2023