This is the title of the web page
This is the title of the web page

Please assign a menu to the primary menu location under menu

State

ವಿಕಲಚೇತನರ, ಆರೈಕೆದಾರರ ಪುನರ್ವಸತಿ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಆ.೧೫ಕ್ಕೆ


ಕೊಪ್ಪಳ ಆಗಸ್ಟ್ ೧೪ : ೨೦೨೧-೨೨ನೇ ರಾಜ್ಯ ಹಣಕಾಸು ಆಯೋಗ ಜಿಲ್ಲಾ ಪಂಚಾಯತ್ ಅನಿರ್ಬಂಧಿತ ಹಾಗೂ ೧೫ನೇ ಹಣಕಾಸು ಯೋಜನೆಯಡಿ ವಿಕಲಚೇತನರ ಮತ್ತು ಆರೈಕೆದಾರರ ಪುನರ್ವಸತಿ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಆಗಸ್ಟ್ ೧೫ರ ಬೆಳಿಗ್ಗೆ ೧೧.೩೦ ಗಂಟೆಗೆ ಕೊಪ್ಪಳದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಉದ್ಘಾಟನೆ ನೆರವೇರಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ.ಬಿಟಿ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಡಾ ಜಿ.ಸಿ ಪ್ರಕಾಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎಂ.ಎಸ್ ಅರ್ಚನಾ, ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಗಂಗಪ್ಪ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗಳಾದ ಶ್ರೀದೇವಿ ಎಸ್ ನಿಡಗುಂದಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


Leave a Reply