ಗದಗ ನವೆಂಬರ್ ೨೮: ಗದಗ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ನವೆಂಬರ್ ೨೯ ರಂದು ಬೆಳಿಗ್ಗೆ ೧೦ ಗಂಟೆಗೆ ಬೆಟಗೇರಿಯ ಲೋಯಲಾ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕೃಷಿ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಕಾರ್ಯಕ್ರಮ ಉದ್ಘಾಟಿ¸ Àಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಗದಗ ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ , ಪಿ.ಸಿ. ಗದ್ದಿಗೌಡರ , ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್ , ಸಲೀಂ ಅಹ್ಮದ್ , ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಮಾರ್ಕೆಟಿಂಗ್ ಕಮ್ಯುನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ , ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳೆ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮದ್ ಮೊಹಸಿನ್, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜ, ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ರವಿ ಗುಂಜೀಕರ್ , ಶಿಕ್ಷಣಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಬುರಡಿ, ಗ್ರಾಮೀಣ ಹಾಗೂ ಶಹರ ವಲಯದ ಪ್ರೌಢ , ಮಾಧ್ಯಮಿಕ, ಪ್ರಾಥಮಿಕ, ದೈಹಿಕ, ಚಿತ್ರಕಲಾ , ವೃತ್ತಿ ಶಿಕ್ಷಣ, ಸೇರಿದಂತೆ ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷರು ಅತಿಥಿಗಳಾಗಿ ಆಗಮಿಸುವರು.ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಸ್ಪರ್ಧೆಗಳ ವಿವರ:
೫ ರಿಂದ ೭ ನೇ ತರಗತಿಯವರೆಗೆ : ವೈಯಕ್ತಿಕ : ಕಂಠಪಾಠ, ಧಾರ್ಮಿಕ ಪಠಣ, ಲಘು ಸಂಗೀತ, ಛದ್ಮ ವೇ಼ಷ , ಕಥೆ ಹೇಳುವುದು , ಚಿತ್ರಕಲೆ, ಅಭಿನಯಗೀತೆ , ಕ್ಲೇ ಮಾಡಲಿಂಗ್, ಭಕ್ತಿಗೀತೆ , ಆಶು ಭಾಷಣ , ಹಾಸ್ಯ , ಭಾಷಣ
೮ ರಿಂದ ೧೨ ನೇ ತರಗತಿಯವರೆಗೆ: ವೈಯಕ್ತಿಕ : ಭಾಷಣ, ಧಾರ್ಮಿಕ ಪಠಣ, ಜಾನಪದಗೀತೆ , ಭಾವಗೀತೆ , ಭರತನಾಟ್ಯ, ಛದ್ಮವೇಷ, ಚಿತ್ರಕಲೆ, ಮಿಮಿಕ್ರಿ, ಚರ್ಚಾಸ್ಪರ್ಧೆ, ರಂಗೋಲಿ, ಗಝಲ್ , ಹಾಸ್ಯ .
ಸಾಮೂಹಿಕ ಕಲೋತ್ಸವ : ಜಾನಪದ ನೃತ್ಯ, ಕ್ವಿಜ್, ಕವ್ವಾಲಿ.
Gadi Kannadiga > State > ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ
More important news
ರೈತ ಬಾಂಧವರ ಗಮನಕ್ಕೆ
07/02/2023
ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
07/02/2023
ಐತಿಹಾಸಿಕ ಲಕ್ಕುಂಡಿ ಉತ್ಸವ : ಮಹಿಳಾ ಗೋಷ್ಟಿ
07/02/2023