ಕೊಪ್ಪಳ ನವೆಂಬರ್ ೨೬: ಕೊಪ್ಪಳ ರೈಲು ನಿಲ್ದಾಣದಲ್ಲಿ ಅಂದಾಜು ೩ ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಎಸ್ಕಲೇಟರಗಳ ಉದ್ಘಾಟನಾ ಸಮಾರಂಭವನ್ನು ನವೆಂಬರ್ ೨೮ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ರೈಲು ನಿಲ್ದಾಣದ ಆವರಣದಲ್ಲಿ ಆಯೋಜಿಸಲಾಗಿದೆ.
ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಹಾಗೂ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ ಅವರು ಉದ್ಘಾಟನೆ ನೆರವೇರಿಸುವರು.
ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಶಾಸಕರುಗಳಾದ ಕೆ.ರಾಘವೇಂದ್ರ ಹಿಟ್ನಾಳ್, ಅಮರೇಗೌಡ ಪಾಟೀಲ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ್ ಬಿ.ಪಾಟೀಲ್, ಶರಣ ಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ನ.೨೮ ರಂದು ಪ್ಪಳ ರೈಲು ನಿಲ್ದಾಣದ ಎಸ್ಕಲೇಟರಗಳ ಉದ್ಘಾಟನೆ