ನಾಳೆ ಲಯನ್ಸ್ ಪರಿವಾರದ ಕ್ರೀಡಾ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಂಘ ಉದ್ಘಾಟನೆ

Murugesh Shivapuji
ನಾಳೆ ಲಯನ್ಸ್ ಪರಿವಾರದ ಕ್ರೀಡಾ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಂಘ ಉದ್ಘಾಟನೆ
WhatsApp Group Join Now

ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದು, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಹಾಗೂ ಅವರಲ್ಲಿರುವ ಸುಪ್ತ ಪ್ರತಿಭೆ ಮತ್ತು ಕೌಶಲ್ಯಗಳಿಗೆ ಪ್ರೇರಣೆ ನೀಡುವುದು, ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವುದು ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸಂಘದ ಪ್ರಮುಖ ಉದ್ದೇಶಗಳಾಗಿವೆ.
-ಡಾ.ಅಶೋಕಕುಮಾರ ರಾ.ಜಾಧವ, ಸಂಘದ ಅಧ್ಯಕ್ಷರು.

(ಗಡಿ ಕನ್ನಡಿಗ ವರದಿ ವಿಜಯಪುರ)
ನಗರದ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರಿಗೆ ಹಾಗೂ ಸಮಾಜಕ್ಕೆ ಒಳಿತಾಗುವ ಸದುದ್ದೇಶದಿಂದ ಕ್ರೀಡಾ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸೇವಾ ಚಟುವಟಿಕೆಗಳನ್ನು ಕೈಗೊಳ್ಳುವ ಉದ್ದೇಶದಿಂದ ಕ್ರೀಡಾ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಂಘ ವಿಜಯಪುರ (ರಿ.) ಇದರ ನೂತನ ಸಂಘದ ಪ್ರಥಮ ಉದ್ಘಾಟನಾ ಸಮಾರಂಭವನ್ನು ಸೆ.6 ರಂದು ಬೆಳಗ್ಗೆ 10 ಗಂಟೆಗೆ ಜಲನಗರದಲ್ಲಿರುವ ಬುದ್ಧ ವಿಹಾರ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಂಟಿ ಕಾರ್ಯದರ್ಶಿ ಹಾಗೂ ಸಿದ್ಧೇಶ್ವರ ಬ್ಯಾಂಕಿನ ವ್ಯವಸ್ಥಾಪಕ ಧರ್ಮರಾಯ ಮಮದಾಪುರ ಹೇಳಿದರು.

ನಗರದ ಬುದ್ಧ ವಿಹಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ನೂತನ ಸಂಘದ 17 ಜನ ಸದಸ್ಯರಿಗೆ ಅಜೀವ ಸದಸ್ಯತ್ವದ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯ ಕಾಣಿಕೆಗಳನ್ನು ಶಾಸಕ ಬಸನಗೌಡ ಪಾಟೀಲ (ಯತ್ನಾಳ) ನೀಡಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಸಮಾಜದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಹಕಾರಿ ಸಂಸ್ಥೆಗಳ ನಿವೃತ್ತ ಉಪ ನಿಭಂದಕ ಚಿದಾನಂದ ನಿಂಬಾಳ ಮಾತನಾಡಿ, ಕಾರ್ಯಕ್ರಮದಲ್ಲಿ ದುರ್ಗಾದೇವಿ ದೇವಸ್ಥಾನ, ಸೋಮದೇವರ ಹಟ್ಟಿಯ ಜಗನು ಮಹಾರಾಜರು ಸಾನ್ನಿಧ್ಯ ವಹಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಪಾಟೀಲ (ಯತ್ನಾಳ) ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಮಹಾಪೌರ ಎಂ.ಎಸ್.ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ ಜಿಲ್ಲಾ ಉಸ್ತುವಾರಿ ಸಚಿವರ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಹಾಂತೇಶ ಬಿರಾದಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಂಘದ ಗೌರವಾಧ್ಯಕ್ಷ ಹಾಗೂ ತುಳಸಿ ಗಿರೀಶ್ ಫೌಂಡೇಶನ್ ಅಧ್ಯಕ್ಷ ಡಾ.ಬಾಬು ರಾಜೇಂದ್ರ ನಾಯಿಕ, ಲಯನ್ಸ್ ಕ್ಲಬ್ ಆಫ್ ಬಿಜಾಪುರ ಪರಿವಾರದ ಅಧ್ಯಕ್ಷ ಲಯನ್ ವಾಲು ಚವ್ಹಾಣ, ಬುದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ಬುದ್ಧ ವಿಹಾರ ಸಮಿತಿ ಕಾರ್ಯದರ್ಶಿ ನಾಗರಾಜ ಲಂಬು ಅವರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ. ನೂತನ ಸಂಘದ ಅಧ್ಯಕ್ಷ ಡಾ.ಅಶೋಕಕುಮಾರ ರಾ.ಜಾಧವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು.

ಸಂಘದ ಅಧ್ಯಕ್ಷ ಡಾ.ಅಶೋಕಕುಮಾರ ರಾ.ಜಾಧವ ಮಾತನಾಡಿ, ನೂತನವಾಗಿ ಪ್ರಾರಂಭವಾಗುತ್ತಿರುವ ಈ ಸಂಘವು ಸಮಾಜದ ವಿವಿಧ ವರ್ಗಗಳ ಜನರನ್ನು ಒಗ್ಗೂಡಿಸುವ ಮೂಲಕ ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅರ್ಥಪೂರ್ಣ ಚಟುವಟಿಕೆಗಳನ್ನು ಕೈಗೊಳ್ಳುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಸರ್ವರಿಗೂ ಡಾ.ಎಸ್.ಎಸ್.ರಾಜಮಾನ್ಯ ಪುಷ್ಪಾ ಮಹಾಂತಮಠ, ಪ್ರೊ.ಎಂ.ಬಿ.ರಾಜಪೂತ, ಧರ್ಮರಾಯ ಮಮದಾಪುರ, ಇಂದುಮತಿ ಕನ್ನೂರ, ಶ್ರೀಶೈಲ ಗಂಗನಳ್ಳಿ, ತಾರಾಸಿಂಗ್ ದೊಡ್ಡಮನಿ, ಫಯಾಜ್ ಕಲಾದಗಿ, ಶ್ರೇಯಸ್ ಮಹೀಂದ್ರಕರ್, ರಜನಿ ಸಂಬಣ್ಣಿ, ರಾಜೇಶ್ ಗಾಯಕ್ವಾಡ್, ಮೋಹನ್ ಚವಾಣ್ ಹಾಗೂ ಪ್ರೊ. ಎಚ್.ಎ.ಕಲಾದಗಿ ಆತ್ಮೀಯ ಸ್ವಾಗತ ಕೋರಿದರು.

WhatsApp Group Join Now
Telegram Group Join Now
Share This Article
error: Content is protected !!