ಗದಗ ಸೆಪ್ಟೆಂಬರ ೭: ಗದಗ ಜಿಲ್ಲಾಡಳಿತ, ಜಿಲ್ಲಾ ಪೊಲೀಸ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗದಗ-ಬೆಟಗೇರಿ ಅವಳಿ ನಗರಕ್ಕೆ ಮಾನ್ಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-೪ ಯೋಜನೆ ಅಡಿಯಲ್ಲಿ ಥರ್ಡ ಐ- ಕಮಾಂಡ ಮತ್ತು ಕಂಟ್ರೋಲ್ ಸೆಂಟರ್‌ನ ಉದ್ಘಾಟನಾ ಸಮಾರಂಭವನ್ನು ನಗರದ ಜಿಲ್ಲಾ ಪೊಲೀಸ ಅಧೀಕ್ಷಕರ ಕಾರ್ಯಾಲಯದಲ್ಲಿ ಸೆಪ್ಟೆಂಬರ್ ೮ ರಂದು ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾನೂನು,ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ಸದಸ್ಯರುಗಳಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ರೋಣ ಶಾಸಕ ಜಿ.ಎಸ್.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ, ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ ಆಗಮಿಸುವರು.ವಿಶೇಷ ಆಹ್ವಾನಿತರಾಗಿ ರಾಜ್ಯದ ಐ.ಜಿ.ಪಿ ಮತ್ತು ಡಿಜಿ ಡಾ.ಅಲೋಕ್ ಮೋಹನ್, ರಾಜ್ಯದ ಎ.ಡಿ.ಜಿ.ಪಿ. ಸಿ.ಟಿ.ಆರ್.ಎಸ್. ಅಲೋಕ್ ಕುಮಾರ್ , ಬೆಳಗಾವಿ ಉತ್ತರ ವಲಯದ ಐ.ಜಿ.ಪಿ. ವಿಕಾಶ್ ಕುಮಾರ್ ವಿಕಾಶ್ , ವಾಣಿಜ್ಯ ತೆರಿಗೆ ಆಯುಕ್ತರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶಿಖಾ ಆಗಮಿಸುವರು. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ ಸರ್ವರಿಗೂ ಸ್ವಾಗತ ಕೋರಿದ್ದಾರೆ.
Gadi Kannadiga > State > ಥರ್ಡ ಐ – ಕಮಾಂಡ ಮತ್ತು ಕಂಟ್ರೋಲ್ ಸೆಂಟರ್‌ನ ಉದ್ಘಾಟನಾ ಸಮಾರಂಭ
ಥರ್ಡ ಐ – ಕಮಾಂಡ ಮತ್ತು ಕಂಟ್ರೋಲ್ ಸೆಂಟರ್‌ನ ಉದ್ಘಾಟನಾ ಸಮಾರಂಭ
Suresh07/09/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023