ಬೆಳಗಾವಿ: ಪ್ರಸ್ತುತ 2022ರ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಈಗಾಗಲೇ ಆರಂಭವಾಗಿದ್ದು, ರೈತರು ಸ್ವತಃ ತಮ್ಮ ಮೊಬೈಲ್ ಮೂಲಕ ಮಾಡಿಕೊಳ್ಳಬಹುದು. ಮೊಬೈಲ್ ಇಲ್ಲದವರು ತಮ್ಮದೇ ಖಾಸಗಿ ನಿವಾಸಿಗಳ ಮೊಬೈಲ್ ಮುಖಾಂತರ ಸಮೀಕ್ಷೆ ಮಾಡಿಕೊಳ್ಳಬಹುದಾಗಿದೆ.
ಈ ಬೆಳೆ ಸಮೀಕ್ಷೆಯಿಂದ ಹಿಂದಿನ ಸಾಲುಗಳಲ್ಲಿ ಕೋವಿಡ್ ಮಹಾಮಾರಿ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರದ ಸವಲತ್ತನ್ನು ಪಡೆದಿರುತ್ತಾರೆ ಹಾಗೂ ಸರಿಯಾಗಿ ಸಮೀಕ್ಷೆ ಮಾಡಿಸಿಕೊಳ್ಳದ ರೈತರು ವಂಚಿತರಾಗಿರುತ್ತಾರೆ. ಆದ್ದರಿಂದ ಕಡ್ಡಾಯವಾಗಿ ಬೆಳೆ ಸಮೀಕ್ಷೆಯನ್ನು ಮಾಡಿಸಿಕೊಳ್ಳಲು ಹಾಗೂ ಸರ್ಕಾರಿ ಸವಲತ್ತು ಪಡೆಯಲು ಅನುವು ಮಾಡಿಕೊಳ್ಳುವ ಮೂಲಕ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯ ತಾಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಖಾನಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.