This is the title of the web page
This is the title of the web page

Please assign a menu to the primary menu location under menu

State

ನಾವಿನ್ಯತೆಯ ಸೃಜನಶೀಲ ಸ್ಪರ್ಧೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ ಆಗಸ್ಟ್ ೨೬ಕ್ಕೆ


ಕೊಪ್ಪಳ ಆಗಸ್ಟ್ ೨೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಖಿ-ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಹಾಗೂ ಕಾರ್ಡ್-ದರ್ಪಣ ಕೊಪ್ಪಳ ಇವರ ಸಹಯೋಗದಲ್ಲಿ ಸ್ವಾತಂತ್ರö್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನಾವೀನ್ಯತೆಯ ಸೃಜನಶೀಲ ಸ್ಪರ್ಧೆಯ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ ಆಗಸ್ಟ್ ೨೬ ರಂದು ಬೆಳಿಗ್ಗೆ ೧೧ಕ್ಕೆ ಕೊಪ್ಪಳದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಶಸ್ತ್ರ ಚಿಕಿತ್ಸಾ ಅಧೀಕ್ಷಕರಾದ ಡಾ ಸುಶೀಲ್ ಕುಮಾರ್ ಕೆ ಅವರು ಅಧ್ಯಕ್ಷತೆ ವಹಿಸುವರು. ವಿಶೇಷ ಅತಿಥಿಗಳಾಗಿ ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯ, ಸಖಿ ಒನ್ ಸ್ಟಾಪ್ ಸೆಂಟರ್ ನೋಡಲ್ ಅಧಿಕಾರಿಗಳಾದ ಪುಷ್ಪ ಜಿ., ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗಂಗಪ್ಪ ಪಾಲ್ಗೊಳ್ಳುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ಉಪಾಧೀಕ್ಷಕರಾದ ಶರಣಬಸಪ್ಪ ಸುಬೇದಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜ ಟಿ., ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀಕ್ಷಕರಾದ ಡಾ.ವೇಣುಗೋಪಾಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ರೋಹಿಣಿ ಕೊಟಗಾರ, ಬೆಂಗಳೂರು ಕಾರ್ಡ್ ದರ್ಪಣದ ಹಿರಿಯ ವಕೀಲರಾದ ಬಿ.ಎನ್ ಮಂಜುನಾಥ, ಜಿಲ್ಲಾ ಆಸ್ಪತ್ರೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ಪ್ರಾಶುಂಪಾಲರಾದ ರೇಣುಕಾ ಪುರೋಹಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೇವದಾಸಿ ಪುನರ್ವಸತಿ ಯೋಜನಾಧಿಕಾರಿಗಳಾದ ಪೂರ್ಣಿಮಾ ಯೋಳಭಾವಿ ಅವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಪ್ಪಳ ಸಖಿ ಒನ್ ಸ್ಯಾಪ್ ಸೆಂಟರ್ ಆಡಳಿತಾಧಿಕಾರಿಗಳಾದ ಯಮುನಾ ಹಾಗೂ ತಂಡದವರು. ಕಾರ್ಡ್ ದರ್ಪಣದ ಪ್ರೋಗ್ರಾಮ್ ಕೋ-ಆರ್ಡಿನೇಟರ್ ಸೌಭಾಗ್ಯ ಹಾಗೂ ತಂಡದವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Leave a Reply