ಕೊಪ್ಪಳ ಏಪ್ರಿಲ್ 29:- ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವಾಧ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಏಪ್ರೀಲ್ 29ರಂದು ಭೇಟಿ ನೀಡಿ ಪರಿಶೀಲಿಸಿದರು.
ಅದೇ ರೀತಿ ನವೋದಯ ಶಾಲೆಯ ಪ್ರವೇಶಕ್ಕಾಗಿ ನಡೆದ ಸ್ಫರ್ಧಾತ್ಮಕ ಪರೀಕ್ಷಾ ಕೇಂದ್ರವಾದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸಹ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 26 ನವೋದಯ ಪ್ರವೇಶ ಪರೀಕ್ಷಾ ಕೇಂದ್ರಗಳಿದ್ದು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಮಟ್ಟದ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ನವೋದಯ ಪ್ರಾಂಶುಪಾಲರು ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎ.ರಡ್ಡೇರ್ ಅವರು ಜಿಲ್ಲಾಧಿಕಾರಿಗಳಿಗೆ ಇದೆ ವೇಳೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕುಕನೂರ ನವೋದಯ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಜಯಾ ಹಾಗೂ ಇತರರು ಇದ್ದರು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ