ಕೊಪ್ಪಳ ಏಪ್ರಿಲ್ ೨೪ : ಮಕ್ಕಳಿಂದ ಚುನಾವಣಾ ಪ್ರಚಾರ ಮಾಡಿಸಿದ ಹಾಗೂ ಮಕ್ಕಳನ್ನು ಪ್ರಚಾರ ಕಾರ್ಯದಲ್ಲಿ ಬಳಸಿಕೊಂಡ ಅಭ್ಯರ್ಥಿಗಳ/ ಪಕ್ಷದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ವಿಧಾನಸಭಾ ಸಾರ್ವ ತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ೬೪-ಕೊಪ್ಪಳ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಮಲ್ಲಿಕಾ ರ್ಜುನ ಅವರು ತಿಳಿಸಿ ದ್ದಾರೆ. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಚುನಾವಣಾ ಪ್ರಚಾರ ಮೆರವಣಿಗೆ ಹಾಗೂ ಇತರೆ ಯಾವುದೇ ಚುನಾ ವಣಾ ಸಂಬಂಧಿತ ಕಾರ್ಯಗಳಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸ ಲಾಗಿದ್ದು, ಈ ವಿಷಯದ ಕುರಿತು ಮುಖ್ಯ ಚುನಾವಣಾ ಧಿಕಾರಿಗಳು, ಬೆಂಗಳೂರು ಇವರು ಏಪ್ರಿಲ್ ೩ರಂದು ಎಲ್ಲಾ ಚುನಾವ ಣಾಧಿಕಾರಿಗಳಿಗೆ ನಿರ್ದೇಶನ ನೀಡಿರುತ್ತಾರೆ. ಈ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಪ್ರತಿನಿಧಿಗಳ ಸಭೆಯಲ್ಲಿಯೂ ಸಹ ಚುನಾವಣಾ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ ನೀಡಲಾಗಿದೆ.
ದೂರು ದಾಖಲು: ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿ ಕೊಂಡ, ಕೃತ್ಯದಲ್ಲಿ ಭಾಗಿಯಾದ ಅಭ್ಯರ್ಥಿಗಳ/ ಪಕ್ಷದ ಅಧ್ಯಕ್ಷರ ಮತ್ತು ಕಾರ್ಯಕರ್ತರ ಮೇಲೆ ಕೊಪ್ಪಳ ನಗರ ಪೊಲೀಸ್ ಠಾಣೆ ಯಲ್ಲಿ ಚುನಾವ ಣಾಧಿಕಾ ರಿಗಳಿಂದ ದೂರು ದಾಖಲಾ ಗಿರುತ್ತದೆ.
ಯಾವುದೇ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಇನ್ಮುಂದೆ ತಮ್ಮ ಚುನಾವಣಾ ಪ್ರಚಾರ ಮತ್ತು ಚುನಾವಣೆಯ ಯಾವುದೇ ಕಾರ್ಯದಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳಬಾರದು ಎಂದು ಸೂಚಿಸಿದೆ. ಒಂದು ವೇಳೆ ಬಳಸಿದ್ದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-೧೯೮೬ (ತಿದ್ದುಪಡಿ ಕಾಯ್ದೆ-೨೦೧೬) ಹಾಗೂ ಐಪಿಸಿ ಮತ್ತು ಇತರೆ ಕಾಯ್ದೆಗಳಡಿ ಪ್ರಕರಣ ಗಳನ್ನು ದಾಖಲಿಸಿ, ಸೂಕ್ತ ಕ್ರಮ ವಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ಕೊಪ್ಪಳ: ಚುನಾವಣಾ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ
ಕೊಪ್ಪಳ: ಚುನಾವಣಾ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ
Suresh24/04/2023
posted on
More important news
ಬೀಟ್ ಮೀಟಿಂಗ್
29/05/2023
ಸಚಿವ ಎಚ್.ಕೆ.ಪಾಟೀಲ ಅವರ ಜಿಲ್ಲಾ ಪ್ರವಾಸ
29/05/2023
ಶ್ರೀ ಯಾಜ್ಞವಲ್ಕö್ಯ ಗುರುಗಳ ಜಯಂತಿ
29/05/2023
ಅಧಿಕಾರ ಸ್ವೀಕಾರ
29/05/2023