This is the title of the web page
This is the title of the web page

Please assign a menu to the primary menu location under menu

State

ಕೋಟಿ ಕಂಠ ಗಾಯನ ಯಶಸ್ವಿಗೆ ಸೂಚನೆ


ಗದಗ ಅಕ್ಟೋಬರ್ ೧೯: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಏರ್ಪಡಿಸಲಾಗಿದ್ದು ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮೂರು ಲಕ್ಷ ಜನ ಒಟ್ಟಿಗೆ ಹಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ. ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು. ನವೆಂಬರ್ ೧ ರಂದು ೬೭ ನೇ ಕರ್ನಾಟಕ ರಾಜ್ಯೊತ್ಸವ ನಾಡಿನಾದ್ಯಂತ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಕಳೆದ ವರ್ಷ ಏಕಕಂಠದಲ್ಲಿ ನಾಡಗೀತೆ ಸೇರಿದಂತೆ ಆಯ್ದ ಕನ್ನಡ ಗೀತೆಗಳನ್ನು ಹಾಡುವ ಮೂಲಕ ಕನ್ನಡಾಭಿಮಾನವನ್ನು ವ್ಯಕ್ತಪಡಿಸಲಾಯಿತು. ಮಾತಾಡ್ ಮಾತಾಡ್ ಕನ್ನಡ ಎನ್ನುವ ಘೋಷವಾಕ್ಯದೊಂದಿಗೆ ನಡೆದ ಲಕ್ಷ ಕಂಠ ಗಾಯನವು ಯಶಸ್ವಿಗೊಳಿಸಿದಂತೆ ಈ ವರ್ಷ ಕೋಟಿ ಕಂಠ ಗಾಯನವನ್ನು ಯಶಸ್ವಿಗೊಳಿಸೋಣ.
ಅಕ್ಟೋಬರ್ ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾದ್ಯಂತ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಗದಗ ಜಿಲ್ಲೆಗೆ ಮೂರು ಲಕ್ಷ ಜನರು ಒಂದೇ ಬಾರಿಗೆ ಕೋಟಿ ಕಂಠ ಗಾಯನ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಗುರಿ ನಿಗದಿಪಡಿಸಿದೆ. ಮೊದಲು ಎಲ್ಲ ಶಾಲಾ , ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ನೌಕರರು,ಜನಸಾಮಾನ್ಯರು, ನೊಂದಣಿ ಮಾಡಿಕೊಳ್ಳಬೇಕು. ನಂತರ ಅಕ್ಟೋಬರ್ ೨೮ ರಂದು ನಿಗದಿಪಡಿಸಲಾದ ಸ್ಥಳದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು.
ನೋಂದಣಿ ಪ್ರಕ್ರಿಯೆಯನ್ನು ಸಂಬಂಧಿತ ಇಲಾಖಾಧಿಕಾರಿಗಳು ಮುತುವರ್ಜಿ ವಹಿಸಿ ಮಾಡಬೇಕು. ನಂತರ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಸ್ಥಳೀಯ ಜನಪ್ರತಿನಿಧಿಗಳನ್ನೊಳಗೊಂಡಂತೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್‌ಗಳಲ್ಲಿಯೂ ಕೂಡ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಯಶಸ್ವಿಗೊಳಿಸಲು ಅಧಿಕಾರಿ ವರ್ಗ ಮುಂದಾಗಬೇಕು ಎಂದರು.
ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮೊದಲಿಗೆ ಕುವೆಂಪು ಅವರ ನಾಡಗೀತೆಯಾದ ಜೈ ಭಾರತ ಜನನಿಯ ತನುಜಾತೆ , ನಂತರ ಜಿಲ್ಲೆಯರೇ ಆದ ಹುಯಿಲಗೋಳ ನಾರಾಯಣರಾಯರು ರಚಿಸಿದ ಉದಯವಾಗಲಿ ಚೆಲುವ ಕನ್ನಡ ನಾಡು, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಡಾ. ಡಿ.ಎಸ್. ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾಚೇತನ, ಡಾ. ಹಂಸಲೇಖಾ ಅವರ ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಏಕಕಾಲದಲ್ಲಿ ಹಾಡಲು ಆಯ್ಕೆ ಮಾಡಲಾಗಿದೆ. ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರಯ್ಯ ಸ್ವಾಮಿ ಬಿ ಅವರು ಮಾತನಾಡಿ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಇಲಾಖೆ ವತಿಯಿಂದ ಅಭಿನಂದನಾ ಪತ್ರವನ್ನು ನೀಡಲಾಗುತ್ತದೆ. ನೋಂದಣಿಗಾಗಿ ಲಿಂಕ್ hಣಣಠಿs://ಞಚಿಟಿಟಿಚಿಜಚಿsiಡಿi.ಞಚಿಡಿಟಿಚಿಣಚಿಞಚಿ.gov.iಟಿ/ಞಞg/ಠಿubಟiಛಿ/ ಆಗಿರುತ್ತದೆ ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಮೆಹಬೂಬ ತುಂಬರಗಟ್ಟಿ, ಡಿ.ವೈ.ಎಸ್.ಪಿ. ಯುವಜನ ಸೇವಾ ಇಲಾಖೆ ಸಹಾಯಕ ನಿರ್ದೇಶಕ ವಿಠಲಕುಮಾರ್ ಜಾಬಗೌಡ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪ್ರತಿನಿಧಿಗಳು ಹಾಜರಿದ್ದರು.


Gadi Kannadiga

Leave a Reply