This is the title of the web page
This is the title of the web page

Please assign a menu to the primary menu location under menu

State

ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ


ಗದಗ ಸೆಪ್ಟೆಂಬರ್ ೮: ೫೭ ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾ ಮಟ್ಟದ ಸಾಕ್ಷರತಾ ದಿನಾಚರಣೆಯನ್ನು ಶುಕ್ರವಾರದಂದು ಜಿಲ್ಲಾಡಳಿತ ಕಛೇರಿಯ ಆವರಣದಲ್ಲಿ ನೆರವೇರಿಸಲಾಯಿತು.
ಜಿಲ್ಲಾಧಿಕಾರಿ ಎಂ.ಎಲ್. ಅವರು ಸಾಕ್ಷರತಾ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ ಶಿಕ್ಷಣದ ಮಹತ್ವ ವನ್ನು ಸಾರುವ ದಿನ ಇದಾಗಿದ್ದು, ನಾವು ಯಾವುದೇ ರಂಗದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಸಾಕ್ಷರತೆ ಅತೀ ಅವಶ್ಯಕವಾಗಿದೆ. ಎಲ್ಲರೂ ಸಾಕ್ಷರರಾಗಬೇಕು ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಎಮ್. ಎ. ರಡ್ಡೇರ ಅವರು ಮಾತನಾಡಿ ನಾವು ಸಾಕ್ಷರತೆಯ ಬಗ್ಗೆ ಬಹಳಷ್ಟು ಮುತುವರ್ಜಿ ವಹಿಸಿ ಸಾಕ್ಷರತೆಯ ಬಗ್ಗೆ ಕಾರ್ಯನಿರ್ವಹಿಸಬೇಕು ಎಲ್ಲ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಕ್ಷೇತ್ರ ಸಂಪನ್ಮೂಲ ವ್ಯಕಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್‌ನ ಹಿರಿಯ ಹಾಗೂ ಕಿರಿಯ ಉಪನ್ಯಾಸಕರು ಜಿಲ್ಲೆಯ ಶಾಲಾ ಬಿಸಿಯೂಟ ಸಿಬ್ಬಂದಿಗಳಲ್ಲಿ ಮತ್ತು ಶಾಲಾ ಅಭಿವೃದ್ಧಿ ವೀಕ್ಷಣಾ ಸಮಿತಿ ಸದಸ್ಯರಲ್ಲಿ ಅನಕ್ಷರಸ್ಥರು ಇದ್ದರೆ ಅಂತವರನ್ನು ಗುರುತಿಸಿ ಅವರನ್ನು ಸಾಕ್ಷರರನ್ನಾಗಿ ಮಾಡಲು ನಮ್ಮ ಹಂತದಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು.ಡಯಟ್‌ದ ಪ್ರಾಚಾರ್ಯರಾದ ಜಿ.ಎಲ್.ಬಾರಾಟಕ್ಕೆ ಅವರು ಮಾತನಾಡಿ ವಿದ್ಯಾವಂತರು ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ನೀಡಲು ಮುಂದಾಗಬೇಕು. ಜನರು ಸ್ವಾವಲಂಬಿಯಾಗಿ ಬದುಕಲು ಸಾಕ್ಷರತೆ ಒಂದು ಊರುಗೋಲು ಇದ್ದಂತೆ ಎಂದು ಹೇಳಿದರು.ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಸ್.ಎಸ್. ಕುರಿಯವರ ಸಾಕ್ಷರತಾ ಪ್ರಮಾಣ ವಚನವನ್ನು ಬೋಧಿಸಿದರು. ಸಾಕ್ಷರತೆ ಕುರಿತು ಪ್ರಾಸ್ತಾವಿಕವಾಗಿ ಮಾತಾನಾಡುತ್ತಾ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಸಂಪೂರ್ಣ ಸಾಕ್ಷರ ಗ್ರಾಮ ಪಂಚಾಯತ ಸಾಕ್ಷರತಾ ಕಾರ್ಯಕ್ರಮ, ಜಿಲ್ಲಾ ಮಟ್ಟದ ಲಿಂಕ್ ಡಾಕ್ಯೂಮೆಂಟ್ ಜನಶಿಕ್ಷಣ ನಿಲಯ ಯೋಜನೆಯಡಿಯ ಮೂಲ ಸಾಕ್ಷರತಾ ಕಾರ್ಯಕ್ರಮ ಮತ್ತು ರಾಷ್ಟ್ರ ಮಟ್ಟದ ನವಭಾರತ ಸಾಕ್ಷರತಾ ಕಾರ್ಯಕ್ರಮಗಳನ್ನು ಜಿಲ್ಲೆಯ ಶಿಕ್ಷಣ ಅಧಿಕಾರಿಗಳು ತಮ್ಮ ಸಹಯೋಗದೊಂದಿಗೆ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.ಸಾಕ್ಷರತಾ ಧ್ವಜಾರೋಣಹಣದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕರು, ಜಿಲ್ಲಾ ಉಪನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕದ ಅಧಿಕಾರಿಗಳು,ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಮನ್ವಯಾಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ವ್ಯಕ್ತಿಗಳು, ಡಿ.ಸಿ.ಪಾವಟೆ ಬಿ.ಎಡ್.ಮಹಾವಿದ್ಯಾಲಯದ ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಕಾರ್ಯಕ್ರಮ ಸಹಾಯಕರಾದ ಅಶೋಕ ಹಾದಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪಿ.ಡಿ. ಮಂಗಳೂರ ವಂದಿಸಿದರು.


Leave a Reply