This is the title of the web page
This is the title of the web page

Please assign a menu to the primary menu location under menu

State

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ


ಕೊಪ್ಪಳ ಮಾರ್ಚ್ ೦೯: ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ ೦೯ ರಂದು ಮಹಿಳಾ ವಾಕ್‌ಥಾನ್ ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಗಂಜ್ ಸರ್ಕಲ್‌ವರೆಗೆ ನಡೆದ ಮಹಿಳಾ ವಾಕ್‌ಥಾನ್ (ಮಹಿಳಾ ನಡಿಗೆ)ಗೆ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾವತಿ ಜಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.
ಮಹಿಳಾ ವಾಕ್‌ಥಾನ್‌ದಲ್ಲಿ ವಿವಿಧ ಇಲಾಖೆಗಳ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಮಹಿಳಾ ಪೌರಕಾರ್ಮಿಕರು, ಸಂಜೀವಿನಿ ಮತ್ತು ಎನ್.ಆರ್.ಎಲ್.ಎಂ ಮಹಿಳಾ ಸ್ವ-ಸಹಾಯ ಸಂಘದವರು, ವಿವಿಧ ಮಹಿಳಾ ಸಂಘಟನೆಯ ಸದಸ್ಯರು ಆಸಕ್ತಿಯಿಂದ ಭಾಗವಹಿ ಹೆಜ್ಜೆ ಹಾಕಿದರು.


Gadi Kannadiga

Leave a Reply