ಗದಗಜುಲೈ ೧೧: ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಹೊಸದಾಗಿ (ಪ್ಯಾರಾ ಲೀಗಲ್ ವಾಲಂಟಿಯರ್ಸ್) ಅರೆ ಕಾಲಿಕ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜುಲೈ ೧೫ ರಂದು ಮುಂಜಾನೆ ೧೦ ಗಂಟೆಗೆ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ಎ.ಡಿ.ಆರ್. ಕಟ್ಟಡ (ಪರಿಹಾರ ವ್ಯಾಜ್ಯಗಳ ಪರಿಹಾರ ಕೇಂದ್ರ) ದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಸಂದರ್ಶನ ಕರೆಯಲಾಗಿದೆ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಈಗಾಗಲೇ ಪತ್ರ ಮುಖೇನ, ದೂರವಾಣಿ ಮುಖೇನ ತಿಳಿಸಲಾಗಿದ್ದು, ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗಲು ತಿಳಿsಸಿದೆ. ಸಂದರ್ಶನಕ್ಕೆ ಹಾಜರಾಗಲು ಯಾವುದೇ ಪ್ರಯಾಣ ಭತ್ಯೆ, ಇತರೆ ಯಾವುದೇ ಭತ್ಯೆ ಇರುವುದಿಲ್ಲ. ಸಂದರ್ಶನಕ್ಕೆ ಬರುವಾಗ ಒಂದು ಸ್ಟಾಂಪ್ ಸೈಜ್ ಫೋಟೋ ಹಾಗೂ ತಮ್ಮ ಆಧಾರ ಕಾರ್ಡ್ ಪ್ರತಿ ಅಥವಾ ಯಾವುದೇ ಗುರುತಿನ ಪತ್ರದ ಝರಾಕ್ಷ ಪ್ರತಿಯೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಅಭ್ಯರ್ಥಿಗಳಿಗೆ ಸಂದರ್ಶನ
ಅಭ್ಯರ್ಥಿಗಳಿಗೆ ಸಂದರ್ಶನ
Suresh11/07/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023