This is the title of the web page
This is the title of the web page

Please assign a menu to the primary menu location under menu

Local News

ರಾಜ್ಯ ಮಟ್ಟದ ಸಮಿತಿಗೆ ಪುಸ್ತಕಗಳ ಆಯ್ಕೆ: ಅರ್ಜಿ ಆಹ್ವಾನ


ಬೆಳಗಾವಿ, ಜು.೦೬ : ಜನವರಿ.೦೧ ೨೦೨೩ ರಿಂದ ಜೂನ್.೩೦ ೨೦೨೩ ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಫರ್ಧಾತ್ಮಕ, ಪಠ್ಯ ಪುಸ್ತಕ, ಸಾಂದಭಿರ್ಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿಗಳನ್ನು ಆಹ್ವಾನಿಸಿದೆ.
೨೦೨೩ ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜುಲೈ.೩೧ ೨೦೨೩ ರ ಸಂಜೆ ೫ ಗಂಟೆ ಒಳಗಾಗಿ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು(ನೋಂದಣಿ ಪತ್ರದ ಪ್ರತಿಯೊಂದಿಗೆ) ನಿಬಂಧನೆಗಳಿಗೆ ಒಳಪಟ್ಟು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ೪ನೇ ಮಹಡಿ, ಡಾ ಅಂಬೇಡ್ಕರ್ ವೀಧಿ, ಬೆಂಗಳೂರು-೫೬೦೦೦೧ ಇಲ್ಲಿ ಸಲ್ಲಿಸಬಹುದು.
ಅರ್ಜಿ ನಮೂನೆಯು ಇಲಾಖೆಯ ಅಂತರ್ಜಾಲದಲ್ಲಿ (ತಿತಿತಿ.ಜಠಿಟ.ಞಚಿಡಿಟಿಚಿಣಚಿಞಚಿ.gov.iಟಿ) ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳಲ್ಲಿ ದೊರೆಯುತ್ತೆವೆ.
ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:
ಪುಸ್ತಕದ ಒಂದು ಪ್ರತಿ, ಕಾಪಿರೈಟ್‌ನ ನೋಂದಣಿಯ ದೃಢೀಕರಿಸಿದ ನಕಲು ಪ್ರತಿ, ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಅರ್ಜಿಯ ಜೊತೆ ಕಡ್ಡಾಯವಾಗಿ ಸಲ್ಲಿಸಬೇಕು ಹಾಗೂ ಸದರಿ ದಾಖಲಾತಿಗಳು ಇಲ್ಲದಿದ್ದಲ್ಲಿ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೦-೨೨೮೬೪೯೯೦, ೨೨೮೬೭೩೫೮ ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply