ಕೊಪ್ಪಳ ನವೆಂಬರ್ ೨೬ : ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡದ ವತಿಯಿಂದ ಅನುಷ್ಠಾನಗೊಳಿಸುವ ಎಲ್ಲಾ ಮಕ್ಕಳ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಅನುಷ್ಠಾನ ಸಮಿತಿಯನ್ನು ರಚಿಸಲು ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಅರ್ಹರಿಂದ ಪ್ರಸ್ತಾವನೆಗೆ ಆಹ್ವಾನಿಸಲಾಗಿದೆ.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡದ ವತಿಯಿಂದ ಅನುಷ್ಠಾನಗೊಳಿಸುವ ಎಲ್ಲಾ ಮಕ್ಕಳ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಅನುಷ್ಠಾನ ಸಮಿತಿಯನ್ನು ರಚಿಸಲು ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳು ಸೂಚಿಸಿರುತ್ತಾರೆ. ಅದರಂತೆ ಕೊಪ್ಪಳ ಜಿಲ್ಲೆಯಲ್ಲಿ ಅರ್ಹ ವ್ಯಕ್ತಿಗಳು ತಮ್ಮ ಸ್ವ-ವಿವರ ಹಾಗೂ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿಯ ಅನುಭವದ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಡಿಸೆಂಬರ್ ೦೨ರ ಸಾಯಂಕಾಲ ೫.೩೦ ಗಂಟೆ ರೊಳಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಆಡಳಿತ ಭವನ ಕೊಪ್ಪಳ, ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೫೩೯-೨೨೨೭೦೩ ಹಾಗೂ ಮೊ.ಸಂ: ೯೯೭೨೯೪೪೪೬೭ ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಮಕ್ಕಳ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಮಿತಿ ರಚನೆಗೆ ಸದಸ್ಯರ ಆಯ್ಕೆ : ಪ್ರಸ್ತಾವನೆಗೆ ಆಹ್ವಾನ
ಮಕ್ಕಳ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಮಿತಿ ರಚನೆಗೆ ಸದಸ್ಯರ ಆಯ್ಕೆ : ಪ್ರಸ್ತಾವನೆಗೆ ಆಹ್ವಾನ
Suresh26/11/2022
posted on
More important news
ರೈತ ಬಾಂಧವರ ಗಮನಕ್ಕೆ
07/02/2023
ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
07/02/2023
ಐತಿಹಾಸಿಕ ಲಕ್ಕುಂಡಿ ಉತ್ಸವ : ಮಹಿಳಾ ಗೋಷ್ಟಿ
07/02/2023