ಗದಗ ಜುಲೈ ೧೩: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಕ್ಟೋಬರ್ ೧ ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ೦೬ ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೦೧ ಸಂಸ್ಥೆಗೆ ಪ್ರಶಸ್ತಿ ಒಟ್ಟು ೦೭ ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಗದಗ ಜಿಲ್ಲಾ ವ್ಯಾಪ್ತಿಯ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಂದ ನಿಗಧಿತ ನಮೂನೆ-೧ ಮತ್ತು ನಮೂನೆ-೨ರಲ್ಲಿ ಎಲ್ಲಾ ಕಾಲಂಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಅಗಸ್ಟ ೧೫ ರೊಳಗಾಗಿ ದ್ವಿಪ್ರತಿಯಲ್ಲಿ ಪ್ರಸ್ತಾವನೆಯನ್ನು ಜಿಲ್ಲಾ ಕಛೆರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್: ತಿತಿತಿ.ಜತಿಜsಛಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಪರಿಶೀಲಿಸಿ ಹಾಗೂ ಕಛೇರಿಯ ದೂರವಾಣಿ ಸಂಖ್ಯೆ:೦೮೩೭೨-೨೨೦೪೧೯ ಗೆ ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ. ಮಹಾಂತೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Suresh13/07/2023
posted on
More important news
ಬೆಳಗಾವಿಯ ಹುಡುಗರ ಸಾಹಸ ” ಪರ್ಯಾಯ”
18/09/2023