This is the title of the web page
This is the title of the web page

Please assign a menu to the primary menu location under menu

Local News

ಉದ್ಯಮಶೀಲತಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ


ಬೆಳಗಾವಿ,ಏ.೩೦: ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್) ಸಹಯೋಗದಲ್ಲಿ ಸ್ವಂತ ಉದ್ಯೋಗ ಕೈಗೊಳ್ಳುವವರಿಗಾಗಿ ೨೦೨೨ರ ಮೇ ತಿಂಗಳಲ್ಲಿ ಜಿಲ್ಲೆಯ ಕಿತ್ತೂರಿನಲ್ಲಿ ಹತ್ತು ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು £Ãಡಲಾಗುವುದು.
ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಭಾಗವಹಿಸುವವರು ೧೮ ವರ್ಷಗಳ ವಯಸ್ಸಿನವರಾಗಿರಬೇಕು ಹಾಗೂ ಓದಲು/ಬರೆಯಲು ಬರುತ್ತಿರಬೇಕು.
ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತ್ತು ಆಧಾರ ಕಾರ್ಡ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ £ರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ ೭೪೮೩೪೫೦೬೭೯ನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಜಂಟಿ £ರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply