This is the title of the web page
This is the title of the web page

Please assign a menu to the primary menu location under menu

Local News

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನ


ಬೆಳಗಾವಿ, ಫೆ.೦೪ : ಬೆಳಗಾವಿ ಜಿಲ್ಲೆಗೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ೨೦೨೨-೨೩ ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ೧೦+೧ ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಗೆ ಎಸ್.ಸಿ-೦೮.ಎಸ್.ಟಿ-೦೨ ಹಾಗೂ ಸಾಮಾನ್ಯ-೫೨. ಒಟ್ಟು-೬೨ ಗುರಿಗಳನ್ನು ನಿಗದಿಪಡಿಸಲಾಗಿದ್ದು, ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವ ೧೮ ರಿಂದ ೬೦ ವಯೋಮಿತಿಯಲ್ಲಿರುವ ಎಸ್.ಸಿ/ಎಸ್.ಟಿ ಹಾಗೂ ಸಾಮಾನ್ಯ ವರ್ಗದ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಸದರಿ ಅರ್ಜಿಯನ್ನು ಈ ಕಛೇರಿಯಿಂದ ಅಥವಾ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಕಛೇರಿಗಳಲ್ಲಿ ಫೆ.೦೬ ರಿಂದ ಪಡೆದು ಫೆ.೨೦, ೨೦೨೩ರ ಒಳಗಾಗಿ ಎರಡು ಪ್ರತಿಯಲ್ಲಿ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ದೃಢೀಕರಿಸಿ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ ೦೮೩೧-೨೪೩೧೨೯೪ ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply