This is the title of the web page
This is the title of the web page

Please assign a menu to the primary menu location under menu

Local News

ಸಿದ್ದರಾಮೋತ್ಸವ ಅಲ್ಲ ಅದು ಸಿದ್ದರಾಮಯ್ಯನವರ 75 ನೇ ಹುಟ್ಟುಹಬ್ಬ : ಸತೀಶ್ ಜಾರಕಿಹೊಳಿ


ಬೆಳಗಾವಿ : ಸಿದ್ದರಾಮಯ್ಯನ ಉತ್ಸವ ಅಲ್ಲ ಅದು ಸಿದ್ದರಾಮಯ್ಯನವರ 75 ನೇ ಹುಟ್ಟುಹಬ್ಬವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿ ಬಳಗ ದಿಂದ ಆಚರಣೆ ಮಾಡುತ್ತಿದ್ದಾರೆ. ಮಾದ್ಯಮದಲ್ಲಿ ಇದು ತಪ್ಪಾಗಿ ಬಿಂಬಿತವಾಗುತ್ತಿದೆ ಎಂದು ನಗರದ ಕಾಂಗ್ರೆಸ್ ಕಚೇರಿಯಲ್ಲ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ತಿಳಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಕಾಂಗ್ರೆಸ್ ಕಾರ್ಯಕರ್ತರೆಲ್ಲ ಸೇರಿ ವಿಜೃಂಭಣೆಯಿಂದ ಆಚರಿಸಲಾಗುತಗತ್ತಿದೆ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮವನ್ನು ಸಿದ್ದರಾಮೋತ್ಸವ ಎಂದು ಮಾದ್ಯಮಗಳಲ್ಲಿ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದರು.

ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ, ಎಲ್ಲರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬ ನಡೆಯುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬೆಳಗಾವಿ ನಗರದ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಪರಿಸ್ಥಿತಿ ನಿರ್ವಹಿಸಲು ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಇರದೇ ಇರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಹಲವಾರು ಬಾರಿ ಸರ್ಕಾರದ ಮೇಲೆ ಒತ್ತಡ ಹೇರಿದೆ. ಜನಸಾಮಾನ್ಯರು ಕೂಡ ಪ್ರಶ್ನೆ ಮಾಡಬೇಕಾಗಿದೆ ಎಂದರು.

 


Gadi Kannadiga

Leave a Reply