ಬೆಳಗಾವಿ, ಜ.೧೭: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಮಹೋತ್ಸವ ಗುರುವಾರ(ಜ. ೧೯) ಏರ್ಪಡಿಸಲಾಗಿದೆ.
ಅಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಸದಾಶಿವನಗರದ ರೆಡ್ಡಿ ಭವನದವರೆಗೆ ಮಹಾಯೋಗಿ ವೇಮನರ ಭಾವಚಿತ್ರದ ಭವ್ಯ ಮೆರವಣಿಗೆ ಹಾಗೂ ಶ್ರೀ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಸಂಜೆ ೫.೩೦ ಗಂಟೆಗೆ ರೆಡ್ಡಿ ಸಭಾಭವನದಲ್ಲಿ ನಡೆಯಲಿದೆ.
ಜಲ ಸಂಪನ್ಮೂಲ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ. ಅ. ಜೊಲ್ಲೆ ಯವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.
ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಅ£ಲ ಬೆ£ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ .
ಸಾಹಿತಿಗಳಾದ ಬಸವರಾಜ ಜಗಜಂಪಿ ಅವರು ಉಪನ್ಯಾಸ £Ãಡಲಿದ್ದಾರೆ. ಮಹೇಶ ಅಬ್ಬಿಹಾಳ ಮತ್ತು ತಂಡದವರು ವಚನಸಂಗೀತ ಪ್ರಸ್ತುತಪಡಿಸಲಿದ್ದಾರೆ. ಪ್ರಾದೇಶಿಕ ಆಯುಕ್ತರಾದ ಎಂ. ಜಿ. ಹಿರೇಮಠ, ಬೆಳಗಾವಿ ಜಿಲ್ಲಾಧಿಕಾರಿಗಳಾದ £ತೀಶ್ ಕೆ. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಾದ ಸಂಜೀವ ಎಂ. ಪಾಟೀಲ, ಬೆಳಗಾವಿ ಉತ್ತರ ವಲಯ ಆರಕ್ಷಕ ಮಹಾ£ರೀಕ್ಷಕರಾದ ಏನ್. ಸತೀಶ್ ಕುಮಾರ್, ಜಿಲ್ಲೆಯ ಪೊಲೀಸ್ ಆಯುಕ್ತರಾದ ಎಂ ಬಿ. ಬೋರಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ£ರ್ವಾಹಕ ಅಧಿಕಾರಿಗಳಾದ ದರ್ಶನ ಎಚ್ ವಿ, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಘಾಳಿ ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಉಪ £ರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ತಿಳಿಸಿದ್ದಾರೆ.
Gadi Kannadiga > Local News > (ಜ. ೧೯) ಶ್ರೀ ಮಹಾಯೋಗಿ ವೇಮನ ಜಯಂತಿ ಮಹೋತ್ಸವ