This is the title of the web page
This is the title of the web page

Please assign a menu to the primary menu location under menu

State

ಜೆಜೆಎಂ ಕಾಮಗಾರಿ: ಶಾಸಕರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ


ಕೊಪ್ಪಳ ಆಗಸ್ಟ್ ೧೯ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕೊಪ್ಪಳದಡಿ ಬರುವ ಜೆಜೆಎಂ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ ೧೮ರಂದು ಸಂಜೆ ನಡೆಯಿತು.
ಜಿಲ್ಲಾ ಪಂಚಾಯತ್ ಕಚೇರಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ಜಲಜೀವನ್ ಮಿಷನ್ ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿಪಡಿಸಿದ ಕಾಲಮಿತಿಯೊಳಗೆ ನಡೆಯುವಂತೆ ನೋಡಿಕೊಳ್ಳಬೇಕು. ಈ ಕಾಮಗಾರಿಯನ್ನು ನಿರಂತರವಾಗಿ ಪರಿಶೀಲಿಸಲು ರಚಿಸಲಾದ ಹೋಬಳಿಮಟ್ಟದ ತನಿಖಾಧಿಕಾರಿಗಳ ತಂಡದವರು ಪ್ರಸ್ತುತ ಕಾಮಗಾರಿಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದು, ನಿಯಮಾನುಸಾರ ಹಾಗೂ ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬಂಧಿಸಿದ ಗುತ್ತೇದಾರರುಗಳಿಗೆ ಸೂಚಿಸಿ ಮೇಲ್ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕೊಪ್ಪಳ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಿನ ಹೋಬಳಿಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.


Leave a Reply