ಬೆಳಗಾವಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ದಯಾಳ ಅಂತ್ಯೋದಯ ಯೋಜನೆ, ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಪುರಸಭೆಯಲ್ಲಿ ನೊಂದಾಯಿತ ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 02 ಹುದ್ದೆಗಳು ಖಾಲಿ ಇದ್ದು, ಗೌರವಧನ ಮಾಸಿಕ 8000 ರೂ.ಗಳು ಹಾಗೂ ಪ್ರಯಾಣ ಭತ್ತೆ ಗರಿಷ್ಠ 2000 ರೂ.ಗಳನ್ನು ನೀಡಲಾಗುದು. ಅರ್ಜಿ ಹಾಕಲು ಹೊಂದಿರಬೇಕಾದ ಅರ್ಹತೆಗಳು : 18 ರಿಂದ 45 ವಯೋಮಿತಿ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು. (ಪ್ರಮಾಣ ಪತ್ರ ಹೊಂದಿರಬೇಕು). ಹುಕ್ಕೇರಿ ಪುರಸಭೆ ವ್ಯಾಪ್ತಿಯ ಖಾಯಂ ನಿವಾಸಿಯಾಗಿದ್ದು, ಸ್ವ-ಸಹಾಯ ಸಂಘದಲ್ಲಿ ಕನಿಷ್ಠ 03 ವರ್ಷದಿಂದ ಸದಸ್ಯರಾಗಿರಬೇಕು. ಬ್ಯಾಂಕ್ಗಳಿAದ ಸಾಲ ಪಡೆದು ಕಟಬಾಕಿದಾರರಾಗಿರಬಾರದು. ಸರ್ಕಾರಿ ಅಥವಾ ಅರೆಸರ್ಕಾರಿ ಅಥವಾ ಎನ್.ಜಿ.ಓಗಳಲ್ಲಿ ಉದ್ಯೋಗಸ್ತರಾಗಿರಬಾರದು. ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೋಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕಾರ್ಯನಿಮಿತ್ಯ ಅಗತ್ಯವಿದ್ದಲ್ಲಿ ಹೊರ ಸಂಚಾರಕ್ಕೆ ಸಿದ್ದರಿರಬೇಕು. ಕಡ್ಡಾಯವಾಗಿ ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ.
ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುವುದು. ಸಮಿತಿಯ ನಿರ್ಣಯವೇ ಅಂತಿಮವಾದದ್ದು, ಆಸಕ್ತ ಅಭ್ಯರ್ಥಿಗಳು ಪುರಸಭೆಯ ಕಚೇರಿ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಅವರನ್ನು ಸಂಪರ್ಕಿಸಿ ಜನವರಿ 26 ರಂದು ಸಂಜೆ 5 ಗಂಟೆ 30 ನಿಮಿಷದ ಒಳಗಾಗಿ ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಹುಕ್ಕೇರಿ ಪುರಸಭೆಯ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹುಕ್ಕೇರಿ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ