ಕೊಪ್ಪಳ ಡಿಸೆಂಬರ್ ೧೯ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೊಪ್ಪಳ ಹಾಗೂ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಉದ್ಯೋಗ ಸೃಜನ ಅರಿವು ಕಾರ್ಯಕ್ರಮವನ್ನು ಡಿಸೆಂಬರ್ ೨೦ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲೆಯ ಯಲಬುರ್ಗಾ ಪಟ್ಟಣದ “ತಾಲೂಕು ಸಮಾಜ ಕಲ್ಯಾಣ ಇಲಾಖೆ” ಹಾಲ್‌ನಲ್ಲಿ ಆಯೋಜಿಸಲಾಗಿದೆ.
ಗ್ರಾಮೀಣ, ನಗರ ಪ್ರದೇಶಗಳಲ್ಲಿರುವ ಯುವಜನರಿಗೆ ಸ್ವ-ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಕಾರ್ಯಕ್ರಮವನ್ನು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ. ಅದರ ಅಂಗವಾಗಿ ಡಿ. ೨೦ ರಂದು ಬೆಳಿಗ್ಗೆ ೧೦-೩೦ಕ್ಕೆ ಯಲಬುರ್ಗಾ ನಗರದ “ತಾಲೂಕು ಸಮಾಜ ಕಲ್ಯಾಣ ಇಲಾಖೆ” ಹಾಲ್‌ನಲ್ಲಿ ಅರಿವು-ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಇದರ ಉಪಯೋಗವನ್ನು ಸಾರ್ವಜ£ಕರು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ.ವೀರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಡಿ. ೨೦ ರಂದು ಯಲಬುರ್ಗಾದಲ್ಲಿ ಉದ್ಯೋಗ ಸೃಜನ ಅರಿವು ಕಾರ್ಯಕ್ರಮ