ಕೊಪ್ಪಳ ಡಿಸೆಂಬರ್ ೦೯: ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ ೧೩ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಉದ್ಯೋಗ ಮೇಳದಲ್ಲಿ ಕೈಗಾರಿಕೆ, ಕೃಷಿ, ಫಾರ್ಮಾ, ಹೆಲ್ತ್ ಸೆಕ್ಟರ್, ಬ್ಯಾಂಕಿಂಗ್, ಫೈನಾನ್ಸಿಯಲ್ಸ್ಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳನ್ನೊಳಗೊಂಡ ೨೫ ರಿಂದ ೩೦ ಉದ್ಯೋಗದಾತ ಕಂಪನಿಗಳು ಭಾಗವಹಿಸಲಿದ್ದು, ಸುಮಾರು ೧೦೦೦ ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಉದ್ಯೋಗಾಕಾಂಕ್ಷಿಗಳು ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರಂ (hಣಣಠಿs://ಜoಛಿs.googಟe.ಛಿom/ಜಿoಡಿms/ಜ/e/೧ಈಂIಠಿಕಿಐSeqmoeWqI_oi೨ಞhಏಛಿsಞoಚಿಥಿಛಿhe೦SxPಞಎqqಜIತಿಥಿSಓಚಿಐ೦ಘಿಣzI೨ಚಿಕಿ/vieತಿಜಿoಡಿm?vಛಿ=೦&ಛಿ=೦&ತಿ=೧&ಜಿಟಡಿ=೦) ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗದ ನೆರವಿಗಾಗಿ Sಞiಟಟ ಅoಟಿಟಿeಛಿಣ ಎಂಬ ಅಧಿಕೃತ ವೆಬ್‌ಪೋರ್ಟಲ್‌ನ್ನು ತಯಾರಿಸಲಾಗಿದ್ದು, ವಿದ್ಯಾರ್ಹತೆ ಅನುಸಾರವಾಗಿ ವಿವಿಧ ರೀತಿಯ ಕೌಶಲ್ಯ ಅನುಭವ ಹೊಂದಿರುವ ಅಭ್ಯರ್ಥಿಗಳು hಣಣಠಿs://sಞiಟಟಛಿoಟಿಟಿeಛಿಣ.ಞಚಿushಚಿಟಞಚಿಡಿ.ಛಿom ನಲ್ಲಿಯೂ ಸಹ ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಈ ಕಛೇರಿಗೆ, ದೂ.ಸಂ: ೯೭೪೩೮೩೯೮೫೯, ೯೮೮೦೭೫೮೯೯೭, ೯೩೫೩೫೧೫೫೧೮ ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಡಿ.೧೩ ರಂದು ನಗರದಲ್ಲಿ ಉದ್ಯೋಗ ಮೇಳ