ಬೆಳಗಾವಿ, ಜೂ.೨೭ ): ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ ವತಿಯಿಂದ ಹುಕ್ಕೇರಿ ತಾಲೂಕಿನ ಯರಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಜುಲೈ.೦೧ ೨೦೨೩ ರಂದು ಬೆಳಿಗ್ಗೆ ೧೦ ಗಂಟೆಯಿಂದ ಮದ್ಯಾಹ್ನ ೨ ಗಂಟೆಯವರೆಗೆ ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ ಹಾಗೂ ಡಿಎಡ್, ಬಿಎಡ್ ಮತ್ತು ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಯಿಂದ “ಉದ್ಯೋಗಮೇಳ” ವನ್ನು ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು hಣಣಠಿs://ಣiಟಿಥಿuಡಿಟ.ಛಿom/೨s೪೨hಜಿಜಿv ಈ ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ ೭೯೭೫೮೫೬೫೬೬, ೯೮೮೦೧೪೯೫೧೩ ಗೆ ಸಂಪರ್ಕಿಸಬಹುದು, ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಜು.೧ ರಂದು ಉದ್ಯೋಗಮೇಳ
ಜು.೧ ರಂದು ಉದ್ಯೋಗಮೇಳ
Suresh27/06/2023
posted on