ಕೊಪ್ಪಳ, ನವೆಂಬರ್ ೧೪: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕಲಬುರಗಿ ವಿಭಾಗ ಮಟ್ಟದ ಕ್ರೀಡಾಕೂಟ(ಹ್ಯಾಂಡ್ ಬಾಲ್, ಬಾಲ್ ಬ್ಯಾಡ್ಮಿಂಟನ್ ಮತ್ತು ಥ್ರೋಬಾಲ್) ಹಾಗೂ ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಾವಳಿ-೨೦೨೨-೨೩ ಅನ್ನು ನವೆಂಬರ್ ೧೫ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಪಂದ್ಯಾವಳಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ. ಚಂದ್ರಶೇಖರ್ ಬಿ. ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಕಲಬುರಗಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತರಾದ ಗರಿಮಾ ಪಂವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ದ ಅಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ್, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ(ರಿ) ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ಸೋಮಶೇಖರ ಹರ್ತಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ಶರಣಬಸನಗೌಡ ಪಾಟೀಲ್, ಭೋಧಕೇತರ ಸಂಘದ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ಪದ್ಮನಾಭ ರಾವ್ ಆಗಮಿಸುವರು.
ಪ್ರಭಾರಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಧರ್ಮಕುಮಾರ ಕಂಬಳಿ, ಮುನಿರಾಬಾದ್ ಡಯಟ್ ಉಪನಿರ್ದೇಶಕರಾದ ಎ.ಶ್ಯಾಮಸುಂದರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರದಾ ಎಂ.ಎ ರಡ್ಡೇರ್, ಜಿಲ್ಲೆಯ ಎಲ್ಲ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ನ.೧೫ ರಂದು ಕಲಬುರಗಿ ವಿಭಾಗ ಮಟ್ಟದ ಕ್ರೀಡಾಕೂಟ