ಕೊಪ್ಪಳ ಫೆಬ್ರವರಿ ೨೦: ಕಲಬುರ್ಗಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳನ್ನು ಒಳಗೊಂಡು ಪಿಂಚಣಿದಾರರ ಕುಂದುಕೊರತೆ ಮತ್ತು ಅಹವಾಲುಗಳಿಗೆ ಸಂಬಂಧಿಸಿದ ಪಿಂಚಣಿ ಅದಾಲತ್ ಫೆಬ್ರವರಿ ೨೨ ರಂದು ಆಯೋಜಿಸಲಾಗಿದೆ.
ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಬೀದರ, ರಾಯಚೂರು, ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ವಾಸವಿರುವ ಪಿಂಚಣಿದಾರರು ಆಯಾ ಜಿಲ್ಲಾಡಳಿತದ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಬೇಕಾಗುತ್ತದೆ. ೬೦ ವರ್ಷ ಮೇಲ್ಪಟ್ಟ ಪಿಂಚಣಿದಾರರು ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಪ್ರಯಾಣ ಮಾಡಲು ದುಸ್ಥರವಾಗುವುದರಿಂದ ಅವರ ಕೇಂದ್ರ ಸ್ಥಾನದಿಂದಲೇ ಈ ಪಿಂಚಣಿ ಅದಾಲತ್‌ನಲ್ಲಿ ಬಾಗವಹಿಸಿ ತಮ್ಮ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ.
ಪಿಂಚಣಿ ಅದಾಲತೆಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಖಜಾನಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು, ಎಲ್ಲಾ ಇಲಾಖೆಗಳ ಪಿಂಚಣಿ ಶಾಖೆಯನ್ನು ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳು ಕಲಬುರ್ಗಿ ಜಿಲ್ಲಾಡಳಿತ ಸಭಾ ಭವನದಲ್ಲಿ ಭಾಗವಹಿಸಲು ಮತ್ತು ಈ ಪಿಂಚಣಿ ಅದಾಲತ್‌ನ್ನು ಯಶ್ವಸಿಗೂಳಿಸಲು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಈ ಪಿಂಚಣಿ ಅದಾಲತ್ ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆ, ಬೆಂಗಳೂರು ಮತ್ತು ಮಹಾಲೇಖಪಾಲರು, ಬೆಂಗಳೂರು ಕಚೇರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಲಿದೆ.
ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ೬೦ ವರ್ಷ ಮೇಲ್ಪಟ್ಟ ಪಿಂಚಣಿದಾರರು ಫೆ. ೨೨ ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ರವರೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ವಿಡೀಯೊ ಕಾನ್ಫರೆನ್ಸ್ ಮೂಲಕ ಬಾಗವಹಿಸಿ, ತಮ್ಮ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಖಜಾನಾಧಿಕಾರಿಗಳಾದ ಮೇಹೆಬೂಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಫೆ. ೨೨ ರಂದು ಕಲ್ಯಾಣ ಕರ್ನಾಟಕ ಪಿಂಚಣಿ ಅದಾಲತ್