This is the title of the web page
This is the title of the web page

Please assign a menu to the primary menu location under menu

State

ಕಲ್ಯಾಣ ಕರ್ನಾಟಕ ಉತ್ಸವ ದಿನ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ


ಕೊಪ್ಪಳ ಸೆಪ್ಟೆಂಬರ್ ೦೨ : ಸೆಪ್ಟೆಂಬರ್ ೧೭ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದರು.ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ ೦೨ರಂದು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಸೆಪ್ಟೆಂಬರ್ ೧೭ರಂದು ಬೆಳಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ.ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಉಪಸ್ಥಿತರಿರುವರು. ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಹಾಗೂ ಸರ್ಕಾರದ ಶಿಷ್ಠಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು ಎಂದು ಸೂಚನೆ ನೀಡಿದರು.ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಅಲಂಕಾರಕ್ಕೆ ಹಾಗೂ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ನಗರಸಭೆಯಿಂದ ಅಗತ್ಯ ಕ್ರಮ ವಹಿಸಬೇಕು. ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಸ್ವಾತಂತ್ರ‍್ಯ ಯೋಧರಿಗೆ ಕಾರ್ಯಕ್ರಮದಲ್ಲಿ ಸನ್ಮಾನಕ್ಕೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಮಾರಂಭದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನರನ್ನುದ್ದೇಶಿಸಿ ಮಾತನಾಡುವರು. ಇದಕ್ಕಾಗಿ ವಿವಿಧ ಇಲಾಖೆಗಳು ಅಗತ್ಯ ಮಾಹಿತಿಯನ್ನು ಸಕಾಲಕ್ಕೆ ನೀಡಬೇಕು ಎಂದು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮಾತನಾಡಿ, ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನ ಒದಗಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗಳಿಗೆ ಮಾತ್ರ ಅವಕಾಶ ನೀಡಬೇಕು ಎಂದರು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಉತ್ಸವವನ್ನು ವ್ಯವಸ್ಥಿತ ಆಚರಣೆಗೆ ರಚಿಸಿದ ಸಮಿತಿಗಳು ತಮಗೆ ನೀಡಿದ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆ.ಕೆ.ಎಸ್.ಆರ್.ಟಿ.ಸಿ ಬಸ್ ಸೌಕರ್ಯ ಒದಗಿಸಬೇಕು. ಮಕ್ಕಳಿಗೆ ಹಾಲು ಅಥವಾ ಲಘು ಉಪಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಶಾಲಾ ಮ್ಕಕಳಿಂದ ಸಾಮೂಹಿಕ ನೃತ್ಯ, ಸಾಧಕರಿಗೆ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಇದ್ದಲ್ಲಿ ಅಂತಹ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಪಟ್ಟ ಸಮಿತಿಗೆ ಮಾಹಿತಿ ನೀಡಬೇಕು ಎಂದರು.ಸಭೆಯಲ್ಲಿ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿ, ಕೊಪ್ಪಳ ನಗರ ಠಾಣೆ ವೃತ್ತ ನಿರೀಕ್ಷಕರಾದ ಸಂತೋಷ ಹಳ್ಳೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply