This is the title of the web page
This is the title of the web page

Please assign a menu to the primary menu location under menu

State

ಕನ್ನಡ ಸಾಹಿತ್ಯ ಪರಿಷತ್ತು ಪ್ರಗತಿಪರ ರೈತರಿಗಾಗಿ ಮೀಸಲಿದ್ದ  ʻಶ್ರೀಮತಿ ಲಿಂಗಮ್ಮ ಮತ್ತು ಡಾ. ಚಿಕ್ಕಕೊಮಾರಿಗೌಡ ಹಾರೋಕೊಪ್ಪʼ ದತ್ತಿ ಪ್ರಶಸ್ತಿ ಪ್ರಕಟ


ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ವಿಶೇಷವಾಗಿ ಪ್ರಗತಿಪರ ರೈತರಿಗೆ ನೀಡುವ ʻ*ಶ್ರೀಮತಿ ಲಿಂಗಮ್ಮ ಮತ್ತು ಡಾ. ಚಿಕ್ಕಕೊಮಾರಿಗೌಡ ಹಾರೋಕೊಪ್ಪ*ʼ ದತ್ತಿ ಪ್ರಶಸ್ತಿ ಪ್ರಕಟಿಸಿದೆ. ೨೦೨೨ನೆಯ ಸಾಲಿನ ಪ್ರಸ್ತುತ ಪ್ರಶಸ್ತಿಗೆ *ಮಂಡ್ಯ ಜಿಲ್ಲೆಯ ಕೆ.ಆರ್‌,ಪೇಟೆಯ ಪ್ರಗತಿಪರ ಕೃಷಿಕ  ಶ್ರೀ ಕೆ. ಎಸ್‌ ಸೋಮಶೇಖರ* ಆಯ್ಕೆಯಾಗಿದ್ದಾರೆ ಎಂದು *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ* ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯ ಸಮಾಜ ಸೇವಕರಾದ  *ಡಾ. ಚಿಕ್ಕಕೊಮಾರಿಗೌಡ* ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿಶೇಷ ದತ್ತಿನಿಧಿ ಸ್ಥಾಪಿಸಿದ್ದಾರೆ.  ಉತ್ತಮ ಸಾಧನೆಮಾಡಿದ ಪ್ರಗತಿಪರ ರೈತರಿಗೆ, ಕರ್ನಟಕ ಪಂಚಾಯತ್‌ ರಾಜ್‌ ಪರಿಷತ್ತಿನಲ್ಲಿ ಪಂಚಾಯತ್‌ ರಾಜ್ಯ ವ್ಯವಸ್ಥೆ ಬಗ್ಗೆ ಉತ್ತಮ ಕೆಲಸ ಮಾಡಿರುವ ಸಂಸ್ಥೆಗಳಿಗೆ, ಉತ್ತಮ ಜನಪ್ರತಿನಿಧಿಗಳಿಗೆ ಮತ್ತು ತಜ್ಞರುಗಳನ್ನು ಗುರುತಿಸಿ ವರ್ಷಕ್ಕೊಬ್ಬರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ೧೦,೦೦೦( ಹತ್ತು ಸಾವಿರ)ರೂ. ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ.
*ಶ್ರೀಮತಿ ಲಿಂಗಮ್ಮ ಮತ್ತು ಡಾ. ಚಿಕ್ಕಕೊಮಾರಿಗೌಡ ಹಾರೋಕೊಪ್ಪ*ʼ ದತ್ತಿ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷತೆ ವಹಿಸಿದ *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ* ಮಾತನಾಡಿ ಪರಿಷತ್ತು ಸಾಧಕರಿಗೆ ಹುಡುಕಿಕೊಂಡು ಹೋಗಿ ಪ್ರಶಸ್ತಿ ನೀಡುತ್ತದೆ. ನಮ್ಮ ನಾಡು ಋಷಿ ಸಂಸ್ಕೃತಿಯನ್ನು ಹೊಂದಿದೆ. ಈ ಸಂಸ್ಕೃತಿ ನಿಂತಿದ್ದೇ ಕೃಷಿ ಸಂಸ್ಕೃತಿಯ ಆಧಾರದ ಮೇಲೆ ಆದ್ದರಿಂದ ರೈತರು ದೇವರಿಗೆ ಸರಿಸಮನಾರು. ಈ ಮಾತನ್ನು ಗುರು ಗೋವಿಂದಭಟ್ಟರು, ಶಿಶುನಾಳ ಶರೀಫರು ಪುಷ್ಟೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಗತಿಪರ ರೈತರಿಗೆ ಕೊಡುವ ಈ ಪ್ರಶಸ್ತಿಯು ಕನ್ನಡ ಸಾಹಿತ್ಯ ಪರಿಷತ್ತಿನ ಹೆಮ್ಮೆಯ ಪ್ರಶಸ್ತಿಗಳ ಪೈಕಿ ಇದು ಒಂದಾಗಿದೆ ಎಂದು ಹೇಳಿದ್ದಾರೆ.
     *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿ ದಾನಿಗಳಾದ ಡಾ. ಚಿಕ್ಕಕೊಮಾರಿಗೌಡ, ಶ್ರೀ ಸಿ. ಕೆ. ರಾಮೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ, ನೇ. ಭ. ರಾಮಲಿಂಗ ಶೆಟ್ಟಿ,  ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್* ಪಾಂಡು ಅವರು ಉಪಸ್ಥಿತರಿದ್ದರು.

Leave a Reply