ಬೆಳಗಾವಿ,ಅ.೧೯: ಶೈಕ್ಷಣಿ ಸಾಧನೆಗೆ ಪಿಯುಸಿ ಅಧ್ಯಯದ ಹಂತ ವಿದ್ಯಾರ್ಥಿಗಳ ಅತ್ಯಂತ ಮಹತ್ವದ ಘಟ್ಟವಾಗಿದ್ದು, ಶಿಕ್ಷಕರು ಮಕ್ಕಳ ಶ್ರೇಯೋಭಿವೃದ್ಧಿ ಗಮನಿಸಿ ಮಾರ್ಗದರ್ಶನ ನೀಡಬೇಕು ಎಂದು ಕಾಡಾ ಅಧ್ಯಕ್ಷ ಹಾಗೂ ಬೈಲಹೊಂಗಲ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಚೇರಮನ್ ಡಾ. ವಿಶ್ವನಾಥ ಆಯ್. ಪಾಟೀಲ ತಿಳಿಸಿದ್ದಾರೆ.
ಬೆಳಗಾವಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿ ಪೂರ್ವ ಮಹಾವಿದ್ಯಾಯಗಳ ಕನ್ನಡ ವಿಷಯ ಪ್ರಾಚಾರ್ಯರ ಹಾಗೂ ಉಪನ್ಯಾಸಕರ ಸಂಘ ಸಂಯುಕ್ತ ಆಶ್ರಯದಲ್ಲಿ ಬೈಲಹೊಂಗಲದ ಕೆ.ಆರ್.ಸಿ. ಪ.ಪೂ. ಕಾಲೇಜಿನಲ್ಲಿ ಇಂದು ಹಮ್ಮಿಕೊಂಡ ಕನ್ನಡ ವಿಷಯ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿನಿಯರ ಸಾಧನೆಯನ್ನು ಗಮನಿಸಿದರೆ ವಿದ್ಯಾರ್ಥಿಗಳ ಸಾಧನೆ ತೃಪ್ತಕರವಾಗುತ್ತಿಲ್ಲ. ಈ ಬಗ್ಗೆ ಗಮನದಲ್ಲಿರಿಸಿಕೊಂಡು ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕವಾಗಿ ಆಸಕ್ತಿ ಹೆಚ್ಚಿಸುವಲ್ಲಿ ಸೂಕ್ತ ಮಾರ್ಗದರ್ಶನ ನೀಡಲು ಅವರು ಸೂಚಿಸಿದರು. ಚನ್ನಮ್ಮ ಕಿತ್ತೂರನ ಆರ್.ಜಿ.ಎಸ್.ಸರಕಾರಿ ಪ.ಪೂ. ಕಾಲೇಜಿನ ಪ್ರಾಚಾರ್ಯರಾದ ಜಿ.ಎಮ್. ಗಣಾಚಾರಿ ಅವರು ಮಾತನಾಡಿ, ಆಧುನಿಕ ತಂತ್ರಜ್ಞಾನ ಬಳಕೆಯೊಂದಿಗೆ ವಿದ್ಯಾರ್ಥಿಗಳು ತಮಗೆ ಅಗತ್ಯವಿರುವ ಜ್ಞಾನ ಪಡೆದುಕೊಳ್ಳುವ ಹಂತದಲ್ಲಿದ್ದು, ಅದಕ್ಕೆ ತಕ್ಕಂತೆ ಉಪನ್ಯಾಸಕರು ಸಿದ್ಧತೆ ಮಾಡಿಕೊಂಡು ಬೋಧಿಸಬೇಕಾಗದ ಅಗತ್ಯವಿದೆ ಎಂದು ತಿಳಿಸಿದರು. ವೇದಿಕೆಯ ಮೇಲೆ ಪ್ರಾಚಾರ್ಯ ಬಿ.ಪಿ. ಬೂದ್ಯಾಳ, ಪ್ರಾಚಾರ್ಯ ಕುದರಿಮೋತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಹಾಗೂ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಫಲಿತಾಂಶ ತಂದ ಕನ್ನಡ ಉಪನ್ಯಾಸಕರ ಅವರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಡಾ. ವೈ.ಎಂ. ಯಾಕೊಳ್ಳಿ ಹಾಗೂ ಧಾರವಾಡದ ಸರ್ಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ಡಾ. ಶ್ರೀಧರ ಹೆಗಡೆ ಭದ್ರನ್ ವಿಷಯ ಕುರಿತು ಉಪನ್ಯಾಸ ನೀಡಿದರು. ಕನ್ನಡ ಪ್ರಾಚಾರ್ಯರ ಮತ್ತು ಉಪನ್ಯಾಸಕರ ಸಂಘದ ಅಧ್ಯಕ್ಷರಾದ ವ್ಹಿ.ಬಿ. ಸೋಮನ್ನವರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಪ್ರಾಚಾರ್ಯರಾದ ಡಾ. ಮಲ್ಲಿಕಾರ್ಜುನ ಎಸ್. ಇಂಚಲ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸರ ರಮೇಶ ಮುರನಕರ್ ನಿರೂಪಿಸಿದರು. ಕೆ.ಎನ್. ದೊಡ್ಡಮನಿ ವಂದಸಿದರು.
Gadi Kannadiga > Local News > ಕನ್ನಡ ವಿಷಯ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಪಿಯುಸಿ ಶೈಕ್ಷಣಿಕ ತಿರುವಿನ ಮಹತ್ವದ ಘಟ್ಟ : ವಿಶ್ವಾನಾಥ ಪಾಟೀಲ
ಕನ್ನಡ ವಿಷಯ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಪಿಯುಸಿ ಶೈಕ್ಷಣಿಕ ತಿರುವಿನ ಮಹತ್ವದ ಘಟ್ಟ : ವಿಶ್ವಾನಾಥ ಪಾಟೀಲ
Suresh19/10/2022
posted on
