This is the title of the web page
This is the title of the web page

Please assign a menu to the primary menu location under menu

Local News

ಶಿಕ್ಷಕ ಕಬ್ಬೂರಗೆ “ಕನ್ನಡ ವಿಭೂಷಣ” ರಾಜ್ಯ ಮಟ್ಟದ ಪ್ರಶಸ್ತಿ


ಬೆಳಗಾವಿ:- ಸವದತ್ತಿ ನಗರದ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆ ನಂ-೬ ರಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಎನ್.ಎನ್.ಕಬ್ಬೂರ ಇವರಿಗೆ ೨೦೨೨ ನೇ ಸಾಲಿನ “ಕನ್ನಡ ವಿಭೂಷಣ” ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ನಾಡಿನ ಸಮಾಚಾರ ಸೇವಾ ಸಂಘದ ಸಂಸ್ಥಾಪಕ ಬಸವರಾಜ ಉಪ್ಪಾರಟ್ಟಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸತತ ೧೫ ವರ್ಷಗಳ ಶಿಕ್ಷಣ ಕ್ಷೇತ್ರದಲ್ಲಿನ ಇವರ ಸೇವೆ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕಾ ಘಟಕದಲ್ಲಿ ನಿರ್ವಹಿಸುತ್ತಿರುವ ಕಾರ್ಯವೈಖರಿ ಮತ್ತು ಶಿಕ್ಷಕ-ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ನೀಡುತ್ತಿರುವ ಉತ್ತಮ ಮತ್ತು ನಿಖರವಾದ ಮಾಹಿತಿಯನ್ನು ಪರಿಗಣಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ನಾಡಿನ ಸಮಾಚಾರ ಸೇವಾ ಸಂಘ (ರಿ) ಹಾಗೂ ಆಶ್ರಯ ಸೇವಾ ಸಂಘ (ರಿ) ಗೋಕಾಕ ಮತ್ತು ಯುವ ಕಾರ್ಯನಿರ್ವಹಿಸುವ ಪತ್ರಕರ್ತರ ಸಂಘ ಜಿಲ್ಲಾ ಘಟಕ ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಗಸ್ಟ ೧೦ ರಂದು ರಂಗಾಯಣ ಸಭಾ ಭವನ ಧಾರವಾಡದಲ್ಲಿ ನಡೆಯುವ ೭೫ ನೇ ಸ್ವಾತಂತ್ರö್ಯ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡ ಕವಿ ಸಮ್ಮೇಳನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಪ್ರತಿ ವರ್ಷ ಸಾಹಿತ್ಯ, ಸಂಗೀತ, ಕಲೆ, ಸಮಾಜಸೇವೆ, ಕ್ರೀಡೆ, ಪತ್ರಿಕೋದ್ಯಮ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.


Gadi Kannadiga

Leave a Reply