ಗವಿಸಿದ್ದೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕರವೇ ಪ್ರತಿಭಟನೆ.

Gadi Kannadiga
ಗವಿಸಿದ್ದೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕರವೇ ಪ್ರತಿಭಟನೆ.
WhatsApp Group Join Now

ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ ಗ್ರಾಮದ ಹಾಗೂ ಕುಷ್ಟಗಿ ನಗರದ ಗವಿಸಿದ್ದೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ನಿರ್ಲಕ್ಷ್ಯ ಖಂಡಿಸಿ , ತಾಲ್ಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿ ಕರವೇ ಗ್ರಾಮ ಘಟಕದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಗವಿಸಿದ್ದೇಶ್ವರ ಕಾಲೇಜಿನ ಮುಖ್ಯದ್ವಾರದಲ್ಲಿ ಧರಣಿ ನಡೆಸಿದರು.

ಕರವೇ ಸಂಘಟನೆಯ ಪ್ರಮುಖ ಬೇಡಿಕೆಗಳು:

ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು(ಆರ್.ಕೆ. 0105) ಹಿರೇಮನ್ನಾಪೂರ, ಮಾನ್ಯತೆ ನವೀಕರಣವಾಗದೇ ವಿದ್ಯಾರ್ಥಿಗಳಿಗೆ ತೊಂದರೆಯನ್ನು ಕೂಡಲೇ ಸರಿಪಡಿಸುವುದು.

ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಗೆ ಸುಸಜ್ಜಿತ ಕಟ್ಟಡಗಳು ಇಲ್ಲದ್ದಕ್ಕೆ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಂಸ್ಥೆಯ ಅಥವಾ ಸರ್ಕಾರಿ ಶಿಕ್ಷಣ ಇಲಾಖೆ ಅನುದಾನದಡಿ ಅನುದಾನಗಳ ಲಭ್ಯತೆಗೆ ಅನುಗುಣವಾಗಿ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ನಂತರ ಮನವಿಯನ್ನು
ಶಾಸಕರಾದ ದೊಡ್ಡನಗೌಡ ಪಾಟೀಲ್ ಹಾಗೂ
ಉಪನಿರ್ದೇಶಕರು ಪದವಿ ಪೂರ್ವ ಕಾಲೇಜ್ ರವರಿಗೆ ಸಲ್ಲಿಸಿದರು.

ಕರವೇ ಪ್ರತಿಭಟನಾಕಾರರ ಬೇಡಿಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ದೊಡ್ಡನಗೌಡ ಪಾಟೀಲ್ ಕಟ್ಟಡ ಹಾಗೂ ಮೂಲಭೂತ ಸೌಕರ್ಯಗಳಿಗೆ ಸಂಬಂಧಪಟ್ಟಂತೆ ಕೆಕೆಆರ್‌ಡಿಬಿ ಅನುದಾನ ಮಂಜೂರಾತಿಗೆ ಪತ್ರ ಬರೆದು ಕ್ರಮವಹಿಸುತ್ತೇನೆ.

ಕಾಲೇಜಿನ ಆಡಳಿತ ಮಂಡಳಿ ಕಾರ್ಯ ಚಟುವಟಿಕೆಗೆ ಸಂಬಂಧಪಟ್ಟಂತೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಶಿಫಾರಸುತ್ತೇನೆ ಎಂದರು.

ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಹನುಮಂತಪ್ಪ ತಳವಾರ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಬೇಡಿಕೆಗಳ ಇತ್ಯರ್ಥಕ್ಕೆ ಕ್ರಮಕೈಗೊಳ್ಳುವಂತೆ ಮನವೊಲಿಸಿದರು.

ಕರವೇ ಗ್ರಾಮ ಘಟಕದ ಅಧ್ಯಕ್ಷ ಪರಸಪ್ಪ ಅಳ್ಳಳ್ಳಿ, ಪ್ರಮುಖರಾದ ಆದಪ್ಪ ಉಳ್ಳಾಗಡ್ಡಿ, ಬಸವರಾಜ ಕನ್ನಾಳ,ಕಳಕಪ್ಪ ಪುರ, ಸಂಗಪ್ಪ ಕತ್ತಿ, ಸಣ್ಣಪ್ಪ ಲೈನದ, ದೊಡ್ಡಪ್ಪ ಬಳೂಟಗಿ, ಮಹಾಂತೇಶ ಹಿರೇಮಠ, ಕನಕಪ್ಪ ಕನ್ನಾಳ ಹುಸೇನಸಾಬ್, ಪುಂಡಲಿಕಪ್ಪ, ಭರತೇಶ್ ಬಿದರಕುಂದಿ, ಹನುಮಪ್ಪ ಕಜ್ಜಿ, ಈರಣ್ಣ ಸುಬೇದಾರ್, ಶರಣಪ್ಪ ವಂದಾಲಿ ಬಸಪ್ಪ ಕತ್ತಿ ಶಿವು ಹಿರೇಮಠ ರಮೇಶ್ ಬೋವಿ ಮರಿಯಪ್ಪ ಹರಿಜನ್ ರಂಜಾನ್ ಅಳ್ಳಳ್ಳಿ, ಶರಣಪ್ಪ ಕೌದಿ ಪ್ರತಿಭಟನೆಯಲ್ಲಿ
ಪಾಲ್ಗೊಂಡಿದ್ದರು.

WhatsApp Group Join Now
Telegram Group Join Now
Share This Article
error: Content is protected !!