This is the title of the web page
This is the title of the web page

Please assign a menu to the primary menu location under menu

State

ಕರ್ನಾಟಕ ವಿಧಾನಸಭಾ ಚುನಾವಣೆ-೨೦೨೩ರ ಮತ ಎಣಿಕೆ ಸುಗಮ: ಜಿಲ್ಲಾ ಚುನಾವಣಾಧಿಕಾರಿ ಎಂ.ಸುಂದರೇಶಬಾಬು


ಕೊಪ್ಪಳ ಮೇ ೧೩ : ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-೨೦೨೩ರ ಮತ ಎಣಿಕೆಯು ಮೇ ೧೩ರಂದು ಕೊಪ್ಪಳ ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ಮತ ಎಣಿಕೆಗಾಗಿ ನಗರದ ಶ್ರೀ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಪೂರ್ವ ನಿಗದಿಯಂತೆ ಬೆಳಗ್ಗೆ ೮ ಗಂಟೆಗೆ ಚುನಾವಣಾ ವೀಕ್ಷಕರು, ಆಯಾ ಕ್ಷೇತ್ರ ಚುನಾವಣಾಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್‌ನ್ನು ತೆರೆಯಲಾಯಿತು. ಬಳಿಕ ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆಯನ್ನು ಪ್ರಾರಂಭಿಸಲಾಯಿತು.
ಆನಂತರ ಭದ್ರತಾ ಕೋಣೆಯಲ್ಲಿದ್ದ ವಿದ್ಯುನ್ಮಾನ ಮತಯಂತ್ರಗಳನ್ನು ಮತ ಎಣಿಕಾ ಕೊಠಡಿಗಳಿಗೆ ಆಯಾ ಸುತ್ತು ಮತ ಎಣಿಕೆಯ ಸಂದರ್ಭದಲ್ಲಿ ಒಯ್ಯಲಾಯಿತು.
ಮತ ಎಣಿಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ೦೨ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿತ್ತು. ಒಂದರಲ್ಲಿ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ಕಾರ್ಯ ಮತ್ತೊಂದರಲ್ಲಿ ಅಂಚೆ ಮತಪತ್ರಗಳ ಎಣಿಕೆ ಕಾರ್ಯ ನಡೆಯಿತು.
ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಇವಿಎಂಗಳ ಮತ ಎಣಿಕೆ ಕಾರ್ಯಕ್ಕೆ ೧೫ ಟೇಬಲ್‌ಗಳು ಮತ್ತು ಅಂಚೆ ಮತ ಎಣಿಕೆಗಾಗಿ ೦೩ ಟೇಬಲ್ ಸೇರಿ ೧೮ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿತ್ತು.ಮತ ಎಣಿಕಾ ಕೇಂದ್ರಕ್ಕೆ ಸಿ.ಸಿ. ಕ್ಯಾಮರಾ ಅಳವಡಿಸಿ ಮತ್ತು ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಅಗತ್ಯ ಭದ್ರತೆ ನೀಡಲಾಗಿತ್ತು.
ಆಯಾಕ್ಷೇತ್ರದ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಮತಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರುಗಳು ಮತ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು.ಮತ ಎಣಿಕೆಯ ಪ್ರತಿ ಸುತ್ತಿನ ಮಾಹಿತಿಯನ್ನು ಜನತೆಗೆ ತಲುಪಿಸಲು ಸೂಕ್ತವಾದ ಮಾಧ್ಯಮ ಕೇಂದ್ರ ವ್ಯವಸ್ಥೆ ಮಾಡಲಾಗಿತ್ತು.ಮತ ಎಣಿಕೆಯ ಹಿನ್ನೆಲೆಯಲ್ಲಿ ಮತ ಎಣಿಕಾ ಕೇಂದ್ರದ ಹೊರಗಡೆ ಮತ್ತು ಒಳಗಡೆ ಸೂಕ್ತವಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯು ಮಧ್ಯಾಹ್ನದ ವೇಳೆಗೆ ಮುಕ್ತಾಯಗೊಂಡು ಫಲಿತಾಂಶವನ್ನು ಪ್ರಕಟಿಸಲಾಯಿತು.


Leave a Reply