ಬೆಳಗಾವಿ ೨೮ :ದಿ ನಾಂಕ ೨೭.೦೬.೨೦೨೩ ರ ಮಂಗಳವಾರದಂದು ಬೆಳಗಾವಿ ನಗರದ ಪೈ ರೆಸಾರ್ಟ ನಲ್ಲಿ ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಬೆಳಗಾವಿ ಜಿಲ್ಲಾ ಘಟಕದ ಸಭೆಯು ಅಧ್ಯಕ್ಷರಾದ ಅನಿಲ ಬೆನಕೆ ರವರ ನೇತೃತ್ವದಲ್ಲಿ ಜರುಗಿತು.
ಸಭೆಯಲ್ಲಿ ಮರಾಠಾ ಸಮಾಜದ ಸಂಘಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಮಾಡುವ ಕುರಿತು ಚರ್ಚಿಸಲಾಯಿತು ಮತ್ತು ಬೆಳಗಾವಿ ನಗರದ ಸದಾಶಿವ ನಗರದಲ್ಲಿ ಛತ್ರಪತಿ ಶ್ರೀ ಶಾಹೂ ಮಹಾರಾಜ ವಸತಿ ನಿಲಯದ ನಿರ್ಮಾಣದ ಕುರಿತು ಕೋರ್ ಕಮೀಟಿ ರಚಿಸುವ ಹಾಗೂ ಅದರ ರೂಪು ರೇಷೆಗಳ ಕುರಿತು ಚರ್ಚೆಯನ್ನು ನಡೆಸಲಾಯಿತು.
ಅದರಂತೆಯೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ, ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರದ ಟೆಕೆಟ್‌ಗಳನ್ನು ಮರಾಠಾ ಸಮುದಾಯಕ್ಕೆ ನೀಡುವ ಕುರಿತು ಚರ್ಚಿಸಲಾಯಿತು. ಈ ಕುರಿತು ದಿನಾಂಕ ೨೪ ಜುಲೈ ೨೦೨೩ ರಂದು ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕು ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದಲ್ಲದೆ ಬೆಂಗಳೂರಿನಲ್ಲಿ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ರಾಜ್ಯಾಧ್ಯಕ್ಷರನ್ನೊಳಗೊಂಡ ನಿಯೋಗವು ಪತ್ರಿಕಾಗೋಷ್ಠಿ ನಡೆಸಿ ರಾಷ್ಟ್ರೀಯ ಪಕ್ಷಗಳು ಮೇಲಿನ ೩ ಲೋಕಸಭಾ ಕ್ಷೇತ್ರಗಳಿಗೆ ಮರಾಠಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ಬೆಳಗಾವಿ ಜಿಲ್ಲಾಧ್ಯಕ್ಷರು ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಮಾಜಿ ಶಾಸಕರಾದ ಅನಿಲ ಬೆನಕೆ, ಜಿಲ್ಲಾ ಉಪಾಧ್ಯಕ್ಷರಾದ ದಿಲೀಪ ಪವಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಘೂ ಪತ್ರಿಕಾ ವರದಿಗಾರ ಸಂಜು ಭೋಸಲೆ, ಗಾಡಿ ವಕಿಲರು, ಕಿತ್ತೂರು ತಾಲೂಕು ಉಪಾಧ್ಯಕ್ಷರಾದ ಬಸವರಾಜ ಆರೇರ, ಖಾನಾಪೂರ ತಾಲೂಕು ಸಂಚಾಲಕರಾದ ರಾವುಳ ಪವಾರ, ಖಾನಾಪೂರ ತಾಲೂಕು ಉಪಾಧ್ಯಕ್ಷರಾದ ಕ್ಯಾಪ್ಟನ್. ಚಂಗಪ್ಪ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.
Gadi Kannadiga > Local News > ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ಬೆಳಗಾವಿ ಜಿಲ್ಲಾ ಘಟಕದ ಸಭೆ
ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ಬೆಳಗಾವಿ ಜಿಲ್ಲಾ ಘಟಕದ ಸಭೆ
Suresh28/06/2023
posted on
